ಧಾರವಾಡ: ಕೋವಿಡ್-19 ನಿಯಂತ್ರಣಕ್ಕಾಗಿ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ನವಲಗುಂದ ತಾಲೂಕಿನ ಹಾಳಕುಸುಗಲ್ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಣ ಸಂಗ್ರಹ ಮಾಡಲಾಯಿತು.
ಕೊರೊನಾ ಬಗ್ಗೆ ಜಾಗೃತಿ ಜೊತೆಗೆ ಗ್ರಾಪಂ ಸದಸ್ಯರಿಂದ ಸಿಎಂ ಪರಿಹಾರ ನಿಧಿಗೆ ದೇಣಿಗೆ ಸಂಗ್ರಹ - Chief Minister's Relief Fund Collection
ಗ್ರಾಮದ ಪ್ರತಿ ಓಣಿಯ ಮನೆ ಮನೆಗೆ ತೆರಳುತ್ತಿರುವ ಗ್ರಾಪಂ ಸದಸ್ಯರು ಜನರಲ್ಲಿ ಕೊರೊನಾ ವೈರಸ್ ಸೋಂಕಿನ ಬಗ್ಗೆ ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸುವುದರ ಜೊತೆಗೆ ನಿಧಿ ಸಂಗ್ರಹ ಮಾಡಿದರು.
ಮುಖ್ಯಮಂತ್ರಿಗಳ ಪರಿಹಾರ ನಿಧಿ ಸಂಗ್ರಹ ಗ್ರಾಮ ಪಂಚಾಯಿತಿ ಸದಸ್ಯರು
ಗ್ರಾಮದ ಪ್ರತಿ ಓಣಿಯ ಮನೆ ಮನೆಗೆ ತೆರಳಿ ಜನರಲ್ಲಿ ಕೊರೊನಾ ವೈರಸ್ ಸೋಂಕಿನ ಬಗ್ಗೆ ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸುವುದರ ಜೊತೆಗೆ ನಿಧಿ ಸಂಗ್ರಹ ಮಾಡಿದರು. ಗ್ರಾಮದ ಜನರು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಣ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಂ.ಎಂ.ದಾನಪ್ಪಗೌಡರ, ಅಧ್ಯಕ್ಷರು, ಸದಸ್ಯರು ಸೇರಿದಂತೆ ಗ್ರಾಮದ ಹಿರಿಯರು ಸೇರಿ ಗ್ರಾಮದಲ್ಲಿ ನಿಧಿ ಸಂಗ್ರಹ ಮಾಡಿದರು.