ಧಾರವಾಡ: ಕೋವಿಡ್-19 ಕುರಿತು ಜನಜಾಗೃತಿಯೇ ಮುಖ್ಯವಾಗಿರುವುದರಿಂದ ಜಿಲ್ಲಾಡಳಿತ ಹಾಗೂ ಅರಣ್ಯ, ಅಬಕಾರಿ ಇಲಾಖೆ ಸಹಯೋಗದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಅರಿವು ಮೂಡಿಸುವ ಕಾರ್ಯಕ್ರಮಗಳು ನಡೆಯುತ್ತಿವೆ.
ಧಾರವಾಡದಲ್ಲಿ ಅರಣ್ಯ ಇಲಾಖೆಯಿಂದ ಕೋವಿಡ್ ಜನಜಾಗೃತಿ
ಪ್ರತಿಯೊಬ್ಬರು ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು, ಪರಸ್ಪರ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಮಹತ್ವವನ್ನು ಗ್ರಾಮಸ್ಥರಿಗೆ ವಿವರಿಸಿದರು.
ಅರಣ್ಯ ಇಲಾಖೆಯಿಂದ ಕೋವಿಡ್ ಜನಜಾಗೃತಿ
ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗವು ಕಲಕೇರಿ, ದೇವಗಿರಿ ಹಾಗೂ ಬೆಣಚಿ ಗ್ರಾಮಗಳ ಅರಣ್ಯ ವಲಯ ಪ್ರದೇಶಗಳಲ್ಲಿ ಕೊರೊನಾ ಜಾಗೃತಿ ಕಾರ್ಯಕ್ರಮ ನಡೆಸಿದರು. ಪ್ರತಿಯೊಬ್ಬರು ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು, ಪರಸ್ಪರ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಮಹತ್ವವನ್ನು ಗ್ರಾಮಸ್ಥರಿಗೆ ವಿವರಿಸಿದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಅಧಿಕಾರಿ ವಿಜಯಕುಮಾರ್, ಉಪ ವಲಯ ಅರಣ್ಯ ಅಧಿಕಾರಿ ಮನಕೂರ್ ಮತ್ತಿತರ ಅಧಿಕಾರಿಗಳು ಜಾಗೃತಿ ಮೂಡಿಸಿದರು.