ಹುಬ್ಬಳ್ಳಿ:ನಗರದ ಗೋಕುಲ ರೋಡಿನ ಅಕ್ಷಯ ಪಾರ್ಕ್ ಬಳಿ ವ್ಯಕ್ತಿಯೊಬ್ಬರಿಗೆ ಕೊರೊನಾ ವೈರಸ್ ದೃಢಪಟ್ಟ ಹಿನ್ನೆಲೆ ಆ ಪ್ರದೇಶವನ್ನು ಸೀಲ್ ಡೌನ್ ಮಾಡಿ ಜಿಲ್ಲಾಡಳಿತ ಘೋಷಣೆ ಮಾಡಿದೆ.
ಹುಬ್ಬಳ್ಳಿಯ ಗೋಕುಲ ರೋಡ್ ಅಕ್ಷಯಪಾರ್ಕ್ ಸೀಲ್ ಡೌನ್ : ಜಿಲ್ಲಾಡಳಿತ ಘೋಷಣೆ - One case found in hubli
ಹುಬ್ಬಳ್ಳಿಯ ಗೋಕುಲ ರೋಡ್ ಅಕ್ಷಯ ಪಾರ್ಕ್ ಬಳಿ ವ್ಯಕ್ತಿಯೊಬ್ಬರಿಗೆ ಕೊರೊನಾ ವೈರಸ್ ದೃಢಪಟ್ಟ ಹಿನ್ನೆಲೆ ಆ ಪ್ರದೇಶವನ್ನು ಸೀಲ್ ಡೌನ್ ಮಾಡಿ ಜಿಲ್ಲಾಡಳಿತ ಘೋಷಣೆ ಮಾಡಿದೆ.
Hubli
ನಗರದ ಗೋಕುಲ ರಸ್ತೆಯ ಅಕ್ಷಯ ಪಾರ್ಕ್ ಬಳಿ ವ್ಯಕ್ತಿಯೋರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ಸೋಂಕಿತ ವ್ಯಕ್ತಿಯ ಮನೆಯಿಂದ ಸುಮಾರು 100 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಸೀಲ್ ಡೌನ್ ಮಾಡಿ ಜಿಲ್ಲಾಡಳಿತ ಘೋಷಣೆ ಮಾಡಿದೆ.
ಅಲ್ಲದೇ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಅನಾವಶ್ಯಕ ತಿರುಗಾಡುವುದನ್ನು ಕೈ ಬಿಟ್ಟು, ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾ ವೈರಸ್ ನಿಯಂತ್ರಣಕ್ಕೆ ಕೈ ಜೋಡಿಸಬೇಕಿದೆ ಎಂದು ಜಿಲ್ಲಾಡಳಿತ ಸಾರ್ವಜನಿಕರಲ್ಲಿ ಮನವಿ ಮಾಡಿದೆ.