ಕರ್ನಾಟಕ

karnataka

ETV Bharat / state

ಟಾಟಾ ಮಾರ್ಕೊಪೊಲೊ ಕಾರ್ಖಾನೆ ಕಾರ್ಮಿಕರಿಗೆ ಕೊರೊನಾ: 8 ದಿನ ಕಾರ್ಯಚಟುವಟಿಕೆ ಸ್ಥಗಿತ - Dharwad corona latest news

ಧಾರವಾಡ ನಗರದ ಹೊರವಲಯದಲ್ಲಿರುವ ಟಾಟಾ ಮಾರ್ಕೊಪೊಲೊ ಕಂಪನಿಯ ಕಾರ್ಮಿಕರಿಗೆ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಇಂದಿನಿಂದ ಆಗಸ್ಟ್ 3ರವರೆಗೆ ಮುಚ್ಚಲು ಕಾರ್ಖಾನೆ ಆಡಳಿತ ಮಂಡಳಿ ನಿರ್ಧರಿಸಿದೆ.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ 
ಜಿಲ್ಲಾಧಿಕಾರಿ ನಿತೇಶ್ ಪಾಟೀಲ 

By

Published : Jul 26, 2020, 10:26 AM IST

ಧಾರವಾಡ:ನಗರದ ಹೊರವಲಯದ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿರುವ ಟಾಟಾ ಮಾರ್ಕೊಪೊಲೊ ಕಂಪನಿಯ ಕಾರ್ಮಿಕರಿಗೆ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಇಂದಿನಿಂದ ಆಗಸ್ಟ್ 3ರವರೆಗೆ ಕಂಪನಿ ಮುಚ್ಚಲು ಕಾರ್ಖಾನೆ ಆಡಳಿತ ಮಂಡಳಿ ನಿರ್ಧರಿಸಿದೆ.

ಈ ಕುರಿತು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ಅವರೊಂದಿಗೆ ಕಂಪನಿಯ ಸಿಇಓ ಸಭೆ ನಡೆಸಿ ಈ ತೀರ್ಮಾನ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಂಪನಿಯ ಕಾರ್ಮಿಕರಿಗೆ ಸೋಂಕು ಕಾಣಿಸಿಕೊಂಡಿರುವುದರಿಂದ ಸ್ಯಾನಿಟೈಸೇಷನ್, ತಪಾಸಣೆಯನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಕಾರ್ಮಿಕರು, ಸಿಬ್ಬಂದಿ ಹಾಗೂ ಕಂಪನಿಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಎಂಟು ದಿನಗಳ ಕಾಲ ಕೈಗಾರಿಕಾ ಘಟಕದ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ಕಾರ್ಖಾನೆ ಆಡಳಿತ ಮಂಡಳಿಯು ಸ್ವಯಂ ಪ್ರೇರಿತರಾಗಿ ನಿರ್ಣಯಿಸಿದ್ದಾರೆ.

ಧೃತಿಗೆಡದಿರಲು ಮನವಿ:ಕೊರೊನಾ ಒಂದು ದುರ್ಬಲ ವೈರಾಣುವಾಗಿದೆ. ಸರಳ ಚಿಕಿತ್ಸೆ ಮೂಲಕ ಸೋಂಕು ನಿವಾರಿಸಿಕೊಳ್ಳಬಹುದಾಗಿದೆ. ಕೊರೊನಾ ಭಯದಿಂದ ಯಾರೊಬ್ಬರೂ ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ಸೋಂಕಿತರಿಗೆ ಮತ್ತು ಪ್ರಾಥಮಿಕ ಸಂಪರ್ಕ ಹೊಂದಿದವರಿಗೆ ನಿರಂತರವಾಗಿ ದೂರವಾಣಿ ಆಪ್ತ ಸಮಾಲೋಚನೆ ನಡೆಸಲಾಗುತ್ತಿದೆ. ದೂರವಾಣಿ ಸಂಪರ್ಕ ಲೈನ್ ಗಳ ಸಂಖ್ಯೆ ಇನ್ನಷ್ಟು ಹೆಚ್ಚಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ‌ ಪಾಟೀಲ ತಿಳಿಸಿದ್ದಾರೆ.

ಧಾರವಾಡ ಮಾನಸಿಕ ಆರೋಗ್ಯ ವಿಜ್ಞಾನ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾನಸಿಕ ಆರೋಗ್ಯ ಮತ್ತು ಆಯುಷ್ ವಿಭಾಗಗಳ ಮೂಲಕ ಮನೋ ಸ್ವಾಸ್ಥ್ಯ ನಿರ್ವಹಣೆಗೆ ವಿಡಿಯೋ ಸಂವಾದದ ಮೂಲಕ ಅಗತ್ಯ ಸಲಹೆಗಳನ್ನು ನೀಡಲಾಗುತ್ತಿದೆ. ಜಿಲ್ಲೆಯ ಜನತೆ ಇವುಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ABOUT THE AUTHOR

...view details