ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಗ್ರಾಮಗಳ ರಕ್ಷಣೆಗೆ ಹೆಬ್ಬಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರು ಮುಂದಾಗಿದ್ದಾರೆ.
ಧಾರವಾಡ: ಸ್ವಯಂಪ್ರೇರಿತರಾಗಿ ಕಠಿಣ ನಿಯಮ ಜಾರಿಗೆ ಮುಂದಾದ ಹೆಬ್ಬಳ್ಳಿ ಗ್ರಾಮ - Darwad corona increase
ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮ ಪಂಚಾಯತಿ ಈ ನಿಟ್ಟಿನಲ್ಲಿ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ.
ಗ್ರಾಮಸ್ಥರು
ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮ ಪಂಚಾಯತಿ ಈ ನಿಟ್ಟಿನಲ್ಲಿ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುತ್ತಿದೆ. ಹೊರ ಊರಿನಿಂದ ಬಂದವರಿಗೆ ಏಳು ದಿನ ಕಡ್ಡಾಯವಾಗಿ ಮನೆಯೊಳಗೆ ಕ್ವಾರಂಟೈನ್ ಆಗಲು ಸೂಚನೆ ನೀಡಲಾಗುತ್ತಿದೆ. ಬೆಂಗಳೂರಿನಿಂದ ಬಂದವರ ಬಗ್ಗೆ ಗ್ರಾ.ಪಂಗೆ ಮಾಹಿತಿ ನೀಡಬೇಕು ಎಂದು ಗ್ರಾಮದಲ್ಲಿ ಅನೌನ್ಸ್ ಮಾಡಿಸಲಾಗುತ್ತಿದೆ.
ಜಿಲ್ಲೆಯಲ್ಲಿ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ಕಠಿಣ ನಿಯಮ ಅನುಸರಿಸಲು ಮುಂದಾಗಿದ್ದಾರೆ.