ಹುಬ್ಬಳ್ಳಿಯಲ್ಲಿ ಓರ್ವ ಕೊರೊನಾ ಸೋಂಕಿತ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ - Corona infected person cure in Hubli
ಧಾರವಾಡದ ನವಲೂರ ಪಠಾಣಗಲ್ಲಿ ನಿವಾಸಿ ಪಿ- 673 ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖನಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಹುಬ್ಬಳ್ಳಿಯಲ್ಲಿ ಓರ್ವ ಕೊರೊನಾ ಸೋಂಕಿತ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಹುಬ್ಬಳ್ಳಿ: ನಗರದಲ್ಲಿ ಇಂದು ಕೊರೊನಾ ಸೋಂಕಿನಿಂದ ಒಬ್ಬರು ಗುಣಮುಖರಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಕೊರೊನಾ ದೃಢಪಟ್ಟಿದ್ದ ಧಾರವಾಡದ ನವಲೂರ ಪಠಾಣಗಲ್ಲಿ ನಿವಾಸಿ ಪಿ-673 ( 26 ವರ್ಷದ ಪುರುಷ) ಸಂಪೂರ್ಣ ಗುಣಮುಖರಾಗಿದ್ದಾನೆ. ಜಿಲ್ಲೆಯಲ್ಲಿ ಇದುವರೆಗೆ 28 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಉಳಿದವರಿಗೆ ಕಿಮ್ಸ್ನಲ್ಲಿ ಚಿಕಿತ್ಸೆ ಮುಂದುವರೆದಿದೆ.