ಧಾರವಾಡ:ಬಿಜೆಪಿಯ ನವಲಗುಂದ ಕ್ಷೇತ್ರದ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಅವರಿಗೆ ಕೊರೊನಾ ಸೋಂಕು ತಗುಲಿದೆ.
ಈ ಕುರಿತು ಫೇಸ್ ಬುಕ್ ನಲ್ಲಿ ಮಾಹಿತಿ ನೀಡಿರುವ ಶಾಸಕರು, ತಮಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಸದ್ಯ ನಾನು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.