ಹುಬ್ಬಳ್ಳಿ: ಕೊರೊನಾ ಸೋಂಕಿತ ವ್ಯಕ್ತಿವೋರ್ವ ತಾನು ಚಿಕಿತ್ಸೆ ಪಡೆಯುತ್ತಿದ್ದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊರೊನಾ ಭಯ.. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿಯೇ ನೇಣಿಗೆ ಶರಣಾದ ರೋಗಿ - ಕೊರೊನಾ ಭಯ,
ಕೊರೊನಾ ಭಯದಿಂದ ರೋಗಿವೋರ್ವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಭೀಮಪ್ಪ ಯಲ್ಲಪ್ಪ ಕಮತರ ಎಂಬುವರು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಚಿಕ್ಕಬಾರ ಗ್ರಾಮದ ಭೀಮಪ್ಪ ಯಲ್ಲಪ್ಪ ಕಮತರ ಎಂಬುವರು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಈ ಸಮಯದಲ್ಲಿ ತಪಾಸಣೆ ಮಾಡಿದಾಗ ಭೀಮಪ್ಪನಿಗೆ ಕೋವಿಡ್ ಪಾಸಿಟಿವ್ ಇದೆ ಎಂಬ ಮಾಹಿತಿ ಲಭ್ಯವಾಗುತ್ತಿದ್ದಂತೆ ಇವರನ್ನು ಕೋವಿಡ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು.
ಮದ್ಯ ವ್ಯಸನಿಯಾಗಿದ್ದ ಭೀಮಪ್ಪ ಕುಡಿಯಲು ಮದ್ಯ ಸಿಗದ ಕಾರಣ ಜೊತೆಗೆ ತಮಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಮನನೊಂದು ಕೋವಿಡ್ ವಾರ್ಡ್ ನ ಕಿಟಕಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.