ಕರ್ನಾಟಕ

karnataka

ETV Bharat / state

ಕಿಮ್ಸ್ ಆಸ್ಪತ್ರೆಯಿಂದ ಕೊರೊನಾ ಸೋಂಕಿತ ಪರಾರಿ... ಮತ್ತೆ ಪೊಲೀಸರ ನಿದ್ದೆಗೆಡಿಸಿದ ಕಳ್ಳ! - ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆ,

ಆಸ್ಪತ್ರೆಯಿಂದ ಕೊರೊನಾ ಸೋಂಕಿತ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕಳ್ಳತನದ ಆರೋಪದಲ್ಲಿ ಪೊಲೀಸರು ಈತನನ್ನು ಬಂಧಿಸಿದ್ದರು. ಈ ವೇಳೆ ಆತನಿಗೆ ಕೊರೊನಾ ಪಾಸಿಟಿವ್​ ಇರುವ ಬಗ್ಗೆ ವರದಿ ಬಂದಿತ್ತು.

corona positive theft escape, corona positive theft escape from Hospital, corona positive theft escape news, Hubli kims hospital, Hubli kims hospital news, ಕೊರೊನಾ ಸೋಂಕಿತ ಕಳ್ಳ ಪರಾರಿ, ಆಸ್ಪತ್ರೆಯಿಂದ ಕೊರೊನಾ ಸೋಂಕಿತ ಕಳ್ಳ ಪರಾರಿ, ಕೊರೊನಾ ಸೋಂಕಿತ ಕಳ್ಳ ಪರಾರಿ ಸುದ್ದಿ, ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆ, ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆ ಸುದ್ದಿ,
ಕಿಮ್ಸ್ ಆಸ್ಪತ್ರೆಯಿಂದ ಕೊರೊನಾ ಸೋಂಕಿತ ಪರಾರಿ

By

Published : Jul 3, 2020, 1:25 PM IST

ಹುಬ್ಬಳ್ಳಿ: ಕೊರೊನಾ ಸೋಂಕು ದೃಢಪಟ್ಟಿದ್ದ ಕಳ್ಳತನದ ಆರೋಪಿಯೋರ್ವ ಕಿಮ್ಸ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.

ಕಳ್ಳತನ ಆರೋಪದಲ್ಲಿ ಉಪನಗರ ಠಾಣೆಯ ಪೊಲೀಸರು ಆತನನ್ನು ಬಂಧಿಸಿದ್ದರು. ಕಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ14,537 ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಇಂದು ಬೆಳಗ್ಗೆ 5.30 ಕ್ಕೆ ಕಿಮ್ಸ್ ಕೋವಿಡ್ ವಾರ್ಡ್​ನಿಂದ ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕಿಮ್ಸ್ ಆಸ್ಪತ್ರೆಯಿಂದ ಕೊರೊನಾ ಸೋಂಕಿತ ಪರಾರಿ

ಇಬ್ಬರ ಪೊಲೀಸ್ ಸಿಬ್ಬಂದಿ ಕಾವಲಿಗಿದ್ದರೂ ಅವರ ಕಣ್ಣು ತಪ್ಪಿಸಿ ಈ ಚಾಲಾಕಿ ಪರಾರಿಯಾಗಿದ್ದು, ನಗರದ ಜನರಲ್ಲಿ ಮತ್ತಷ್ಟು ಆತಂಕ ಶುರುವಾಗಿದೆ.

ಈತನ ಸಂಪರ್ಕದಿಂದ ಉಪನಗರ ಠಾಣೆಯ ಕಾನ್ಸ್​ಟೇಬಲ್​ಗೆ ಕೊರೊನಾ ದೃಢಪಟ್ಟಿದೆ. ಆರೋಪಿ ಮತ್ತೆ ಪರಾರಿಯಾಗಿದ್ದಾನೆ. ಈ ಸಂಬಂಧ ವಿದ್ಯಾನಗರ ಠಾಣೆಯಲ್ಲಿ‌ ‌ಪ್ರಕರಣ ದಾಖಲಾಗಿದ್ದು, ಕಳ್ಳನ ಶೋಧ ಕಾರ್ಯದಲ್ಲಿ ಪೊಲೀಸರು ನಿರತರಾಗಿದ್ದಾರೆ.

ABOUT THE AUTHOR

...view details