ಹುಬ್ಬಳ್ಳಿ:ಆರೋಪಿಗಳು ಸಿಕ್ಕರೂ ಅವರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬರದಂತಹ ಸ್ಥಿತಿ ಹುಬ್ಬಳ್ಳಿ ಪೊಲೀಸರಿಗೆ ಎದುರಾಗಿದೆ.
ನಗರದ ಕಸಬಾ ಪೇಟೆ ಪೊಲೀಸ್ ಠಾಣೆಯಲ್ಲಿ ಬೈಕ್ ಕಳ್ಳತನ ಮಾಡಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅವರಲ್ಲಿ ಒಬ್ಬನಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ನಗರದ ಪ್ರಮುಖ ಪೊಲೀಸ್ ಠಾಣೆಯ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಸೋಂಕು ಹೇಗೆ ಬಂತು ಎಂಬುದು ತಿಳಿಯದಂತಾಗಿದೆ.