ಕರ್ನಾಟಕ

karnataka

ETV Bharat / state

ಕೊರೊನಾ ಹೆಚ್ಚಳ: ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಪರೀಕ್ಷೆ ಮುಂದೂಡಿದ ಕವಿವಿ - ಕೊರೊನಾ ಹಿನ್ನೆಲೆ ಪರೀಕ್ಷೆ ಮುಂದೂಡಿದ ಕರ್ನಾಟಕ ವಿಶ್ವವಿದ್ಯಾಲಯ,

ವಸತಿ ನಿಲಯದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಗೆ ಕರ್ನಾಟಕ ವಿಶ್ವವಿದ್ಯಾಲಯ ಸ್ಪಂದಿಸಿ ಪರೀಕ್ಷೆ ಮುಂದೂಡಿದೆ.

Karnataka university exam postponed, Karnataka university exam postponed news, Karnataka university exam postponed for corona rise, ಪರೀಕ್ಷೆ ಮುಂದೂಡಿದ ಕರ್ನಾಟಕ ವಿಶ್ವವಿದ್ಯಾಲಯ, ಕೊರೊನಾ ಹಿನ್ನೆಲೆ ಪರೀಕ್ಷೆ ಮುಂದೂಡಿದ ಕರ್ನಾಟಕ ವಿಶ್ವವಿದ್ಯಾಲಯ, ಪರೀಕ್ಷೆ ಮುಂದೂಡಿದ ಕರ್ನಾಟಕ ವಿಶ್ವವಿದ್ಯಾಲಯ ಸುದ್ದಿ,
ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಪರೀಕ್ಷೆ ಮುಂದೂಡಿದ ಕವಿವಿ

By

Published : Apr 20, 2021, 4:12 AM IST

ಧಾರವಾಡ:ರಾಜ್ಯದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ ಕವಿವಿ ಪರೀಕ್ಷೆಗಳನ್ನು ಮುಂದೂಡಲು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ‌ ನಡೆಸಿದರು.

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಪರೀಕ್ಷೆ ಮುಂದೂಡಿದ ಕವಿವಿ

ಕವಿವಿ ಕುಲಪತಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಸ್ನಾತಕ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಕವಿವಿ ಕುಲಪತಿ ಬರುವಂತೆ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರು. ಬಳಿಕ ಕುಲಪತಿ ಕೆ.ಬಿ. ಗುಡಸಿ ಹಾಗೂ ಮೌಲ್ಯಮಾಪನ ಕುಲಸಚಿವ ಪ್ರೊ. ರವೀಂದ್ರನಾಥ ಕದಂ ಆಗಮಿಸಿ ಅನಿರ್ಧಿಷ್ಟಾವಧಿಗೆ ಪರೀಕ್ಷೆಗಳನ್ನು ಮುಂದೂಡಿದ ಆದೇಶ ಪ್ರತಿ ಓದಿದರು.

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಪರೀಕ್ಷೆ ಮುಂದೂಡಿದ ಕವಿವಿ

ವಸತಿ ನಿಲಯಗಳಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಕಾರಣ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಆಗ್ರಹಿಸಿದ್ದಾರೆ. ಹಾಸ್ಟೆಲ್‌ಗಳನ್ನು ಬಂದ್ ಮಾಡುವಂತೆ ಒತ್ತಾಯಿಸಿದರು. ಸಾರಿಗೆ ನೌಕರರ ಮುಷ್ಕರದಿಂದ ಹಂತಹಂತವಾಗಿ ಕವಿವಿ ಪರೀಕ್ಷೆಗಳನ್ನು ಮುಂದೂಡಿತ್ತು. ಇದೀಗ ಕೊರೊನಾ ಹೆಚ್ಚಳ‌ ಹಿನ್ನೆಲೆ ಕವಿವಿ ಸ್ನಾತಕ, ಸ್ನಾತಕೋತ್ತರ ಪರೀಕ್ಷೆಗಳನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಕವಿವಿ ಆಡಳಿತ ಮಂಡಳಿ ಹೇಳಿದೆ.

For All Latest Updates

TAGGED:

ABOUT THE AUTHOR

...view details