ಹುಬ್ಬಳ್ಳಿ :ಜಿಲ್ಲೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸರ್ವೆ ಕಾರ್ಯವನ್ನು ಚುರುಕುಗೊಳಿಸಿದೆ. ಆರೋಗ್ಯ ಸಮೀಕ್ಷೆ ಕಾರ್ಯವನ್ನು ಸಾಮಾನ್ಯವಾಗಿ ಎಲ್ಲೆಡೆ ಆಶಾ ಕಾರ್ಯಕರ್ತೆಯರು ನಿರ್ವಹಿಸುತ್ತಾರೆ. ಆದರೆ, ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಪ್ರದೇಶ ವ್ಯಾಪ್ತಿ ದೊಡ್ಡದಾಗಿರುವುದರಿಂದ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ವಿಶೇಷ ಪ್ರಯತ್ನದಿಂದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕಿಯರೂ ಕೂಡ ಈ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಮನೆ ಮನೆಗೂ ತೆರಳಿ ಕೊರೊನಾ ಸರ್ವೆ.. - Survey function from Hubli District
ಅಂಗನವಾಡಿ ಆಶಾ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕಿಯರು ಹುಬ್ಬಳ್ಳಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದರಿಂದ ಸರ್ವೆ ಕಾರ್ಯ ಮಾಡುತ್ತಿದ್ದಾರೆ.
ಕೊರೊನಾ ಸರ್ವೆ
ಅಂಗನವಾಡಿ ಆಶಾ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕಿಯರ ಶ್ರಮಕ್ಕೆ ಜಿಲ್ಲಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.