ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಕೊರೊನಾ ವಾರಿಯರ್ವೊಬ್ಬರು ಬಲಿಯಾಗಿದ್ದಾರೆ.
ಹುಬ್ಬಳ್ಳಿಯಲ್ಲಿ ಕೊರೊನಾ ಸೋಂಕಿನಿಂದ ಎಎಸ್ಐ ಸಾವು! - Hubli
ಚಿಕಿತ್ಸೆ ಫಲಿಸದೆ ವಿದ್ಯಾನಗರ ಠಾಣೆ ಎಎಸ್ಐ ಒಬ್ಬರು ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಹುಬ್ಬಳ್ಳಿ ಮೊದಲ ಕೊರೊನಾ ವಾರಿಯರ್ ಬಲಿ...
ಚಿಕಿತ್ಸೆ ಫಲಿಸದೆ ವಿದ್ಯಾನಗರ ಠಾಣೆ ಎಎಸ್ಐ ಒಬ್ಬರು ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಾವೇರಿ ಮೂಲದ ಇವರಿಗೆ 58 ವರ್ಷ ವಯಸ್ಸಾಗಿತ್ತು. ಕಳೆದ ಒಂದು ವಾರದಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜು. 1ರಿಂದ 7ರವರೆಗೆ ಹೋಂ ಕ್ವಾರಂಟೈನ್ನಲ್ಲಿ ಇದ್ದರು.
ಜು. 7ರಂದು ಕೊರೊನಾ ದೃಢಪಟ್ಟಿದ್ದರಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.