ಹುಬ್ಬಳ್ಳಿ: ಹು-ಧಾ ಮಹಾನಗರವನ್ನು ಸ್ವಚ್ಛಗೊಳಿಸಿ ಹಾಗೂ ಅವಳಿನಗರದಲ್ಲಿ ಬರುವ ತ್ಯಾಜ್ಯವನ್ನು ಸರಿಯಾಗಿ ನಿರ್ವಹಣೆ ಮಾಡುವ ಸದುದ್ದೇಶದಿಂದ ಹಾಗೂ ಕಾಂಪೋಸ್ಟ್ ಗೊಬ್ಬರ ತಯಾರಿಕೆ ಹಿನ್ನೆಲೆಯಲ್ಲಿ ಹು-ಧಾ ಮಹಾನಗರ ಪಾಲಿಕೆ ಹೊಸ ಯೋಜನೆ ಕೈಗೆತ್ತಿಕೊಂಡಿದೆ. ಈ ಯೋಜನೆ ಸಾವಯವ ಕೃಷಿಗೆ ಪೂರಕವಾಗಿದೆ.
ಘನ ತ್ಯಾಜ್ಯ ವಸ್ತು ನಿರ್ವಹಣೆ - 2016 ರ ಅನ್ವಯ ಹು - ಧಾ ಮಹಾನಗರದಲ್ಲಿ 178 ಆಟೋ ಟಿಪ್ಪರ್ ಮೂಲಕ ಹಸಿ ಮತ್ತು ಒಣ ಕಸ ಸಂಗ್ರಹಣೆ ಮಾಡಲಾಗುತಿದೆ. ಹು-ಧಾ ಅವಳಿ ನಗರದಲ್ಲಿ ಎರಡು ಘಟಕಗಳನ್ನು ಸ್ಥಾಪನೆ ಮಾಡಿದ್ದು, ಸಂಗ್ರಹವಾದ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಂಗಡಣೆ ಮಾಡುವ ಮೂಲಕ ಕಾಂಪೋಸ್ಟ್ ಗೊಬ್ಬರ ತಯಾರಿಕೆ ಮಾಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಮಹಾನಗರ ಪಾಲಿಕೆ ಹೊಸ ಪ್ರಯೋಗಕ್ಕೆ ಮುಂದಾಗಿದೆ.