ಹುಬ್ಬಳ್ಳಿ: ಅವಳಿ ನಗರವನ್ನು ಸ್ಮಾರ್ಟ್ ಮಾಡಲು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಕಷ್ಟು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಅನೇಕ ಪ್ರಯೋಗಗಳನ್ನು ಕೂಡ ಮಾಡಲಾಗುತ್ತಿದೆ. ಆದರೆ, ಕೆಲವರು ನಿರ್ಲಕ್ಷ್ಯವಹಿಸುತ್ತಿದ್ದು, ಅಂಗಡಿಗಳ ಮಾಲೀಕರಿಗೆ ಪಾಲಿಕೆ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಹು-ಧಾ ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 47ರ ವ್ಯಾಪ್ತಿಯಲ್ಲಿರುವ ಪಾನ್ಶಾಪ್ ಅಂಗಡಿಯವರು ರಸ್ತೆ ಬದಿಯಲ್ಲಿ ಕಸ ಚೆಲ್ಲಿದ್ದರು. ಈ ಅವ್ಯವಸ್ಥೆಯನ್ನು ಅರಿತ ಪಾಲಿಕೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಕಸವನ್ನು ಅಂಗಡಿ ಮಾಲೀಕರಿಂದಲೇ ಸ್ವಚ್ಛಗೊಳಿಸುವ ಮೂಲಕ ಮತ್ತೆ ಕಸ ಎಸೆಯದಂತೆ ಎಚ್ಚರಿಕೆಯ ಸಂದೇಶ ರವಾನಿಸಿದರು.