ಧಾರವಾಡ:ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯಲಿದ್ದು, ಜಿಲ್ಲಾಡಳಿತ ಸರ್ವ ರೀತಿಯ ತಯಾರಿ ಮಾಡಿಕೊಂಡಿದೆ.
ಧಾರವಾಡ ಕ್ಷೇತ್ರ:ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜು
ಧಾರವಾಡ ಲೋಕಸಭೆ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದ್ದು,ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸಜ್ಜಾಗಿದೆ.
ಧಾರವಾಡ ಲೋಕಸಭಾ ಕ್ಷೇತ್ರ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಮತ ಎಣಿಕೆಗೆ ಪೂರಕವಾಗುವಂತೆ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರವಾರು ಮತಯಂತ್ರಗಳನ್ನು ಜೋಡಿಸಿದ್ದು, ನಾಳೆ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದೆ.
ಮತ ಎಣಿಕೆಗೆ 1,700 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮತ ಎಣಿಕಾ ಕಾರ್ಯ 19 ಸುತ್ತುಗಳಲ್ಲಿ ನಡೆಯಲಿದ್ದು, ಸ್ಟ್ರಾಂಗ್ ರೂಮ್ ಸುತ್ತಮುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಒದಗಿಸಲಾಗಿದೆ. ಸ್ಟ್ರಾಂಗ್ ರೂಮ್ ಮತ್ತು ಮತ ಎಣಿಕೆಯ ಕಾರ್ಯಕ್ಕೆ 1,050 ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಲಾಗಿದೆ.