ಕರ್ನಾಟಕ

karnataka

ETV Bharat / state

ಸುಳ್ಳು ಸಾಕ್ಷಿ ಹೇಳುವಂತೆ ಒತ್ತಡ... ವಿನಯ ಕುಲಕರ್ಣಿ ವಿರುದ್ಧ ಎಫ್​ಐಆರ್ ದಾಖಲಿಸಲು ಕೋರ್ಟ್​ ಆದೇಶ - ಎಫ್​ಐಆರ್

ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಮೂವರ ಮೇಲೆ ಸುಳ್ಳು ಸಾಕ್ಷಿ ಹೇಳುವಂತೆ ಒತ್ತಡದ ಆರೋಪದ ಅಡಿ ಎಫ್​ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಧಾರವಾಡ ಜೆಎಮ್​ಎಫ್​ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ವಿನಯ ಕುಲಕರ್ಣಿ

By

Published : Apr 8, 2019, 9:37 PM IST

Updated : Apr 8, 2019, 10:40 PM IST

ಧಾರವಾಡ:ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ವಿನಯ ಕುಲಕರ್ಣಿ ಸದ್ಯ ಸಂಕಷ್ಟದ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ.

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್​ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಳ್ಳು ಸಾಕ್ಷಿ ಹೇಳಲು ಸಾಕ್ಷಿಗಳಿಗೆ ಬೆದರಿಕೆ ಹಾಕಲಾಗಿದೆ ಎಂದು ಮೃತ ಯೋಗೀಶ್ ಗೌಡ ಸಹೋದರ ಗುರುನಾಥಗೌಡ ಕೋರ್ಟ್ ಮೊರೆ ಹೋಗಿದ್ದರು.

ಮೃತ ಯೋಗೀಶ್ ಗೌಡ ಸಹೋದರ ಗುರುನಾಥಗೌಡ

ಈ ಸಂಬಂಧ ಇಂದು ವಿಚಾರಣೆ ನಡೆಸಲಾಯಿತು.ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಇಬ್ಬರು ಪೋಲಿಸ್ ಅಧಿಕಾರಿಗಳು, ಮೂವರ ಮೇಲೆ ಸುಳ್ಳು ಸಾಕ್ಷಿ ಹೇಳುವಂತೆ ಒತ್ತಡ ಹಾಕಿದ್ದರು ಎಂದು ಆರೋಪಿಸಲಾಗಿತ್ತು. ಇದೀಗ ಈ ಬಗ್ಗೆ ಎಫ್​ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಧಾರವಾಡ ಜೆಎಮ್​ಎಫ್​ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ, ಡಿವೈಎಸ್ಪಿ ತುಳಜಪ್ಪ ಸುಲ್ಪಿ ಹಾಗೂ ಚಂದ್ರಶೇಖರ್ ಮೇಲೆ ಎಫ್‌ಐಆರ್ ದಾಖಲಿಸಲು ಆದೇಶ ಹೊರಡಿಸಲಾಗಿದೆ.
ಇದರಿಂದ ಸದ್ಯ ಧಾರವಾಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿಗೆ ಸಂಕಷ್ಟ ಎದುರಾದಂತಿದೆ.

Last Updated : Apr 8, 2019, 10:40 PM IST

ABOUT THE AUTHOR

...view details