ಹುಬ್ಬಳ್ಳಿ: ಕೋವಿಡ್ಗೆ ಇಡೀ ವಿಶ್ವವೇ ತತ್ತರಿಸಿದೆ. ಈ ಸಂದರ್ಭದಲ್ಲಿ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಜೀವನ ಸಾಗಿಸುವುದೇ ಕಷ್ಟವಾಗಿದೆ. ಈ ಮಧ್ಯೆ ಖಾಸಗಿ ಶಾಲೆಗಳ ದುಬಾರಿ ಪ್ರವೇಶಾತಿ ಶುಲ್ಕ ಭರಿಸಲಾಗದೆ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ.
ಖಾಸಗಿ ಶಾಲೆಗಳ 2,932 ಮಕ್ಕಳು ಸರ್ಕಾರಿ ಶಾಲೆಗಳಿಗೆ ಸೇರಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಒಟ್ಟು 1,520 ಸರ್ಕಾರಿ ಶಾಲೆಗಳಿದ್ದು, ಈಗಾಗಲೇ 3.23 ಲಕ್ಷ ಮಕ್ಕಳು ಪ್ರವೇಶ ಪಡೆದಿದ್ದಾರೆ ಎಂಬುದು ತಿಳಿದು ಬಂದಿದೆ.
ಸರ್ಕಾರಿ ಶಾಲೆಗಳಿಗೆ ಸೇರಿದ ಖಾಸಗಿ ಶಾಲಾ ಮಕ್ಕಳು ಕೊರೊನಾದಿಂದಾಗಿ ಸಾಕಷ್ಟು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಇಂತಹ ಪರಿಸ್ಥಿತಿಯಲ್ಲಿ ಎಲ್ಲಾ ಪೋಷಕರು ದೊಡ್ಡಮಟ್ಟದ ಶುಲ್ಕ ಕಟ್ಟುವ ಪರಿಸ್ಥಿತಿಯಲ್ಲಿಲ್ಲ. ಹಾಗಾಗಿ, ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುತ್ತಿದ್ದಾರೆ.
ಸರ್ಕಾರವೂ, ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಹೀಗಾಗಿ, ಶಾಲೆಗಳು, ಆರಂಭಕ್ಕೂ ಮುನ್ನವೇ ಪೋಷಕರು ತಮ್ಮ ಮಕ್ಕಳನ್ನ ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ.
ಮಕ್ಕಳು ಹಾಗೂ ಪೋಷಕರಲ್ಲಿ ಕೋವಿಡ್ ಆತಂಕ ಹೆಚ್ಚಾಗಿದೆ. ಈ ಮಧ್ಯೆ ಸರ್ಕಾರ ಯಾವಾಗ ಶಾಲೆಗಳನ್ನ ಪುನಾರಂಭ ಮಾಡುತ್ತದೆ ಅನ್ನೋದು ಪ್ರಶ್ನೆಯಾಗಿದೆ.