ಕರ್ನಾಟಕ

karnataka

ETV Bharat / state

ಕೋವಿಡ್ ನಿಯಮ ಉಲ್ಲಂಘನೆ ಆರೋಪ: ಡಿಕೆಶಿ​​ಗೆ 10 ಸಾವಿರ ರೂ. ದಂಡ! - Hubli corporation fined 10 thousand Rs DK Shivakumar

ಸಾಮಾಜಿಕ ಅಂತರ ಕಾಪಾಡದ ಹಿನ್ನೆಲೆ, ಅನುಮತಿಯಿಲ್ಲದೆ ಬ್ಯಾನರ್, ಬಂಟಿಂಗ್ಸ್​​ ಹಾಕಿದ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.

DK Shivakumar
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

By

Published : Jun 2, 2021, 1:05 PM IST

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ 10 ಸಾವಿರ ರೂ. ದಂಡ ವಿಧಿಸಿದೆ.

ಮೇ 31ರಂದು ಸಂಜೆ ಹುಬ್ಬಳ್ಳಿಗೆ ಭೇಟಿ ನೀಡಿದ್ದ ಡಿ.ಕೆ.ಶಿವಕುಮಾರ್ ಕೇಶ್ವಾಪುರದ ಸರ್ವೋದಯ ವೃತ್ತದ ಬಳಿಯ ಮದರ್ ತೆರೆಸಾ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆ್ಯಂಬುಲೆನ್ಸ್, ಕೋವಿಡ್ ಸೇವಾ ವಾಹನ, ಆಕ್ಸಿಜನ್ ಇತ್ಯಾದಿ ಸೌಲಭ್ಯಗಳಿಗೆ ಚಾಲನೆ ನೀಡಿದ್ದರು.

ಪಾಲಿಕೆ ಪರಿಸರ ಎಂಜಿನಿಯರ್‌‌ ನಯನ

ಈ ವೇಳೆ ಜನಜಂಗುಳಿ ವಾತಾವರಣ ನಿರ್ಮಾಣವಾಗಿತ್ತು. ಸಾಮಾಜಿಕ ಅಂತರ ಕಾಪಾಡದ ಹಿನ್ನೆಲೆ, ಅನುಮತಿಯಿಲ್ಲದೆ ಬ್ಯಾನರ್, ಬಂಟಿಂಗ್ಸ್​​ ಹಾಕಿದ ಆರೋಪದ ಮೇಲೆ ಮಹಾನಗರ ಪಾಲಿಕೆಯಿಂದ 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ದಂಡ ವಿಧಿಸಿರುವುದಾಗಿ ಪಾಲಿಕೆ ಪರಿಸರ ಎಂಜಿನಿಯರ್‌‌ ನಯನ ತಿಳಿಸಿದ್ದಾರೆ.

ಓದಿ:OMG: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬ್ಲ್ಯಾಕ್​ ಫಂಗಸ್‌ ಔಷಧ ಕಳವು!

ABOUT THE AUTHOR

...view details