ಕರ್ನಾಟಕ

karnataka

ETV Bharat / state

ರಸ್ತೆಗಿಳಿದ ಹು-ಧಾ ಪೊಲೀಸರು ; ಕೋವಿಡ್​ ನಿಯಮ ಉಲ್ಲಂಘಿಸಿದವ್ರಿಗೆ ದಂಡದ ಬಿಸಿ! - hubli covid rules

ಈ ಹಿನ್ನೆಲೆ ಹು-ಧಾ ಮಹಾನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಉಪನಗರ ಠಾಣೆ ಪೊಲೀಸರು ನಿಯಮ ಉಲ್ಲಂಘನೆ ಮಾಡಿದವ್ರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ಮಾಸ್ಕ್ ಧರಿಸದೇ ಓಡಾಡುವವರಿಗೆ ದಂಡ ವಿಧಿಸಿ ಮಾಸ್ಕ್ ಧರಿಸುವಂತೆ ಸಲಹೆ ನೀಡುತ್ತಿದ್ದಾರೆ..

covid rules violation in hubli
ರಸ್ತೆಗಿಳಿದ ಹು-ಧಾ ಪೊಲೀಸರು; ಕೋವಿಡ್​ ನಿಯಮ ಉಲ್ಲಂಘಿಸಿದವ್ರಿಗೆ ದಂಡದ ಬಿಸಿ!

By

Published : Apr 3, 2021, 3:17 PM IST

ಹುಬ್ಬಳ್ಳಿ: ಕೋವಿಡ್​ ಭೀತಿ ಹಿನ್ನೆಲೆ ಧಾರವಾಡ ಜಿಲ್ಲೆಯಲ್ಲಿ ಇಂದಿನಿಂದ ಕಠಿಣ ನಿಯಮ ಜಾರಿಯಾಗಿದ್ದರೂ ಕೂಡ ಜನ ಮಾತ್ರ ಯಾವುದಕ್ಕೂ ಜಗ್ಗುತ್ತಿಲ್ಲ. ಆದ್ರೆ, ಹು-ಧಾ ಮಹಾನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಉಪನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡು ನಿಯಮ ಉಲ್ಲಂಘಿಸಿದವ್ರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.

ಕೋವಿಡ್​ ನಿಯಮ ಉಲ್ಲಂಘಿಸಿದವ್ರಿಗೆ ದಂಡದ ಬಿಸಿ!

ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದರೂ ಕೂಡ ಜನ ಯಾವುದೇ ಭಯವಿಲ್ಲದೇ ಓಡಾಡುವ ದೃಶ್ಯ ಕಂಡು ಬಂದಿದೆ. ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣದಲ್ಲಿ ಜನಸಂದಣಿಯಾಗಿತ್ತು. ಬಸ್​ಗಳೊಳಗೆ ಯಾರೂ ಕೂಡ ನಿಯಮ ಪಾಲಿಸಿರಲಿಲ್ಲ.

ಇದನ್ನೂ ಓದಿ:'ಸಿಡಿ' ಕೇಸ್​ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಹೈಕೋರ್ಟ್​ಗೆ ಪಿಐಎಲ್​

ಈ ಹಿನ್ನೆಲೆ ಹು-ಧಾ ಮಹಾನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಉಪನಗರ ಠಾಣೆ ಪೊಲೀಸರು ನಿಯಮ ಉಲ್ಲಂಘನೆ ಮಾಡಿದವ್ರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ಮಾಸ್ಕ್ ಧರಿಸದೇ ಓಡಾಡುವವರಿಗೆ ದಂಡ ವಿಧಿಸಿ ಮಾಸ್ಕ್ ಧರಿಸುವಂತೆ ಸಲಹೆ ನೀಡುತ್ತಿದ್ದಾರೆ.

ABOUT THE AUTHOR

...view details