ಹುಬ್ಬಳ್ಳಿ : ಹುಬ್ಬಳ್ಳಿಯ ಉಪನಗರ ಠಾಣೆಯ ಮಹಿಳಾ ಕಾನ್ಸ್ಟೇಬಲ್ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಮಹಿಳಾ ಪೊಲೀಸ್ ಕಾನ್ಸ್ಟೇಬಲ್ಗೆ ಕೊರೊನಾ ದೃಢ: ಆತಂಕದಲ್ಲಿ ಸಿಬ್ಬಂದಿ
ಹುಬ್ಬಳ್ಳಿಯ ಉಪನಗರ ಠಾಣೆಯ ಮಹಿಳಾ ಕಾನ್ಸ್ಟೇಬಲ್ಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಪೊಲೀಸ್ ಸಿಬ್ಬಂದಿಯ ಆತಂಕ ಹೆಚ್ಚಿಸಿದೆ.
Police
39 ವರ್ಷದ ಮಹಿಳಾ ಕಾನ್ಸ್ಟೇಬಲ್ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ನೆಗಡಿ, ಕೆಮ್ಮು ಹಿನ್ನೆಲೆಯಲ್ಲಿ ಅವರನ್ನು ತಪಾಸಣೆಗೆ ಒಳಪಡಿಸಿದಾಗ ಕೊರೊನಾ ಸೋಂಕು ದೃಢಪಟ್ಟಿದೆ.
ಈಗಾಗಲೇ ಕಳ್ಳತನ ಆರೋಪಿಯಿಂದ ಇಬ್ಬರು ಸಿಬ್ಬಂದಿಗೆ ಸೋಂಕು ತಗುಲಿತ್ತು. ಇದೀಗ ಮಹಿಳಾ ಸಿಬ್ಬಂದಿಗೂ ವೈರಸ್ ತಗುಲಿದ್ದು, ಉಪನಗರ ಠಾಣೆ ಪೊಲೀಸರಿಗೆ ಮತ್ತಷ್ಟು ಆತಂಕ ಶುರುವಾಗಿದೆ.