ಹುಬ್ಬಳ್ಳಿ: ದನದ ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ ಹಸುಗಳು ಸಜೀವವಾಗಿ ದಹನವಾದ ಘಟನೆ ಕಲಘಟಗಿ ತಾಲೂಕಿನ ಗುಡ್ಡದ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ದನದ ಕೊಟ್ಟಿಗೆಗೆ ದುಷ್ಕರ್ಮಿಗಳಿಂದ ಬೆಂಕಿ?: ಹಸುಗಳು ಸಜೀವ ದಹನ - ದನದ ಕೊಟ್ಟಿಗೆಗೆ ಬೆಂಕಿ
ನೀಲಕಂಠಗೌಡ ಪಾಟೀಲ್ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಗೆ ತಡರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ದನದ ಕೊಟ್ಟಿಗೆಗೆ ಬೆಂಕಿಯಿಟ್ಟ ಆರೋಪ....ಮೂರು ಹಸುಗಳು ಸಜೀವ ದಹನ
ನೀಲಕಂಠಗೌಡ ಪಾಟೀಲ್ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಗೆ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಪರಿಣಾಮ ಮೂರು ಹಸುಗಳ ಸಜೀವ ದಹನವಾಗಿವೆ. ಗ್ರಾಮದ ಹೊರವಲಯದಲ್ಲಿರುವ ಕೊಟ್ಟಿಗೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.
ಕಲಘಟಗಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.