ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ವಾಚ್ ವಿಚಾರವಾಗಿ ಸ್ನೇಹಿತರ ನಡುವೆ ಜಗಳ.. ಕೊಲೆಯಲ್ಲಿ ಅಂತ್ಯ - ಹುಬ್ಬಳ್ಳಿ

Hubli crime: ಇಬ್ಬರು ಸ್ನೇಹಿತರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Hubli
ಅಸ್ಲಾಂ ಮಕಂದಾರ್ ಕೊಲೆಯಾದ ವ್ಯಕ್ತಿ

By ETV Bharat Karnataka Team

Published : Sep 6, 2023, 2:06 PM IST

ಹುಬ್ಬಳ್ಳಿ:ಸ್ಮಾರ್ಟ್ ವಾಚ್ ವಿಚಾರವಾಗಿ ಸ್ನೇಹಿತರಿಬ್ಬರ ಮಧ್ಯೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ನಗರದ ಬೆಂಗೇರಿಯ ವೆಂಕಟೇಶ ಕಾಲೋನಿಯಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಸಿದ್ರಾಮನಗರ ನಿವಾಸಿ ಅಸ್ಲಾಂ ಮಕಾಂದಾರ್ (31) ಕೊಲೆಯಾದ ವ್ಯಕ್ತಿ. ಗಾಯತ್ರಿ ನಗರದ ಮಂಜುನಾಥ ನಾಗರಾಜ ಜೀನಹಳ್ಳಿ ಕೊಲೆ ಆರೋಪಿ. ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಹಿನ್ನೆಲೆ:ಮೃತ ಅಸ್ಲಾಂ ಮಕಾಂದಾರ್ ಹಾಗೂ ಅರೋಪಿ ಮಂಜುನಾಥ ಇಬ್ಬರು ಸ್ನೇಹಿತರಾಗಿದ್ದರು. ಕಳೆದ ಕೆಲ ದಿನಗಳ ಹಿಂದೆ ಮಂಜುನಾಥ್ ಅಸ್ಲಾಂಗೆ ಸ್ಮಾರ್ಟ್ ವಾಚ್ ಕೊಟ್ಟಿದ್ದನಂತೆ. ಆದ್ರೆ ಅಸ್ಲಾಂ ವಾಚ್ ಕೊಡದೆ ಸತಾಯಿಸುತ್ತಿದ್ದನಂತೆ. ನಿನ್ನೆ(ಮಂಗಳವಾರ) ರಾತ್ರಿ ಬೆಂಗೇರಿಯ ವೆಂಕಟೇಶ ಕಾಲೋನಿಯಲ್ಲಿ ಎಗ್ ರೈಸ್ ತಿನ್ನುವ ವೇಳೆ ಇದೇ ವಿಷಯವಾಗಿ ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿ‌ ಮಂಜುನಾಥ, ಅಸ್ಲಾಂನ ಎದೆಯ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾನೆ. ಚಾಕು ಇರಿತಕ್ಕೊಳಗಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಸ್ಲಾಂನನ್ನು ಆತನ ಸ್ನೇಹಿತರು ಕಿಮ್ಸ್​ಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ಕೇಶ್ವಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Hassan crime : ಮದ್ಯ ಸೇವಿಸಿದ ವಿಷಯವನ್ನು ತಂದೆಗೆ ತಿಳಿಸಿದ ಸ್ನೇಹಿತನ ಕೊಲೆ ; ಇಬ್ಬರು ಸೆರೆ

ಕ್ಷುಲ್ಲಕ ಕಾರಣಕ್ಕೆ ಪ್ರಾರಂಭವಾದ ಜಗಳ ಕೊಲೆಯಲ್ಲಿ ಅಂತ್ಯ: ಕ್ಷುಲ್ಲಕ‌ ಕಾರಣಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ನಡೆದಿತ್ತು. ಇಲ್ಲಿನ ದೊಡ್ಡೇರಿ ಗ್ರಾಮದ ನರೇಂದ್ರ (35) ಕೊಲೆಯಾದ ವ್ಯಕ್ತಿ. ಈತನನ್ನು ಸಿದ್ದಪುರ ತಾಂಡಾದ ನಿವಾಸಿ ಹರೀಶ್ ಎಂಬಾತ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ ಎನ್ನಲಾಗಿತ್ತು.

ಏನಿದು ಘಟನೆ? : ಹರೀಶ್ ಹಾಗೂ ನರೇಂದ್ರ ಭದ್ರಾವತಿ ಅಂಡರ್ ಬ್ರಿಡ್ಜ್ ಬಳಿ ಬಾರ್​ಗೆ ಕುಡಿಯಲು ಪ್ರತ್ಯೇಕವಾಗಿ ಹೋಗಿದ್ದರು. ಈ ವೇಳೆ, ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಬಾರ್ ಒಳಗಡೆ ಜಗಳ ನಡೆದಿದೆ. ನಂತರ, ನರೇಂದ್ರ ಬಾರ್​ನಿಂದ ಹೊರ ಬಂದು ಬಸ್ ನಿಲ್ದಾಣದಿಂದ ಹೊಸ ಸೇತುವೆ ಬಳಿ ಆಟೋ ಹಿಡಿದು ಹೊರಡುವಾಗ ಹರೀಶ್ ಎಂಬಾತ ಹಿಂಬಾಲಿಸಿಕೊಂಡು ಬಂದು ನರೇಂದ್ರನಿಗೆ ಚಾಕುವಿನಿಂದ ಇರಿದು ಬಳಿಕ ಓಡಿ ಹೋಗಿದ್ದ.

ಘಟನೆ ನಡೆದ ಕೆಲವೇ ನಿಮಿಷದಲ್ಲಿ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳು ನರೇಂದ್ರನನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಬಳಿಕ, ಹೆಚ್ಚಿನ ಚಿಕಿತ್ಸೆಗೆ ಎಂದು ಶಿವಮೊಗ್ಗಕ್ಕೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಹರೀಶ್​ನನ್ನು ಪೊಲೀಸರು ಬಂಧಿಸಿದ್ದರು. ಈತ ರೌಡಿಶೀಟರ್ ಆಗಿದ್ದು, ಹಲವು ಪೊಲೀಸ್ ಠಾಣೆಗಳಲ್ಲಿ ಕೇಸ್​ಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಭದ್ರಾವತಿ: ಕ್ಷುಲ್ಲಕ ಕಾರಣಕ್ಕೆ ಪ್ರಾರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

ABOUT THE AUTHOR

...view details