ಧಾರವಾಡ: ಜಿಲ್ಲೆಯಲ್ಲಿ ಅವಧಿ ಮುಕ್ತಾಯವಾದ ಗ್ರಾಮ ಪಂಚಾಯತಿಗೆ ಸಾರ್ವತ್ರಿಕ ಚುನಾವಣೆ ಹಾಗೂ ವಿವಿಧ ಕಾರಣಗಳಿಂದ ತೆರವಾದ ಸದಸ್ಯ ಸ್ಥಾನಗಳಿಗೆ ಅಕ್ಟೋಬರ್ 28 ರಂದು ಉಪ ಚುನಾವಣೆ ನಡೆಯಲಿದೆ.
ಧಾರವಾಡ: 19 ಗ್ರಾ.ಪಂ ವ್ಯಾಪ್ತಿಯಲ್ಲಿ ಮದ್ಯ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ - liquor sale banned in dharwada
ಧಾರವಾಡದ 19 ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಮದ್ಯಪಾನ ಮತ್ತು ಮದ್ಯ ಮಾರಾಟ, ಮದ್ಯ ಸಾಗಾಣಿಕೆ ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಅಕ್ಟೋಬರ್ 26 ರಂದು ರಾತ್ರಿ 11.59 ಗಂಟೆಯಿಂದ ಅ.28 ರ ಬೆಳಗಿನ 6 ಗಂಟೆಯವರೆಗೆ 19 ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರದೇಶಗಳಲ್ಲಿ ಮದ್ಯಪಾನ, ಮಾರಾಟ ಹಾಗು ಮದ್ಯ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ:ಕರ್ತವ್ಯಕ್ಕೆ ಹಾಜರಾದ ದಿನವೇ ಲಂಚ ಆರೋಪ; ಪ್ರೊಬೇಷನರಿ ಅಬಕಾರಿ ನಿರೀಕ್ಷಕಿ ಎಸಿಬಿ ವಶಕ್ಕೆ
Last Updated : Oct 21, 2022, 10:17 PM IST