ಕರ್ನಾಟಕ

karnataka

ETV Bharat / state

ಬಿಜೆಪಿ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ: ಡಿ ಕೆ ಶಿವಕುಮಾರ್

ಜನರು ಬದಲಾವಣೆ ಮಾಡಲು ತೀರ್ಮಾನ ಮಾಡಿದ್ದಾರೆ. ಜನರ ಆಕ್ರೋಶ, ಧ್ವನಿ ಈ ಚುನಾವಣೆಯಲ್ಲಿ ಗೊತ್ತಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

d-k-shivakumar
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

By

Published : Oct 7, 2021, 9:24 PM IST

ಹುಬ್ಬಳ್ಳಿ:ಹಾನಗಲ್ ಉಪ ಚುನಾವಣೆಯಲ್ಲಿ ಜನರು ಬದಲಾವಣೆ ಬಯಸಿದ್ದಾರೆ. ನಮ್ಮ ಅಭ್ಯರ್ಥಿ ನಿರಂತರವಾಗಿ ಕಳೆದ ಮೂರು ವರ್ಷದಿಂದ ಜನರ ಸಂಪರ್ಕದಲ್ಲಿದ್ದಾರೆ. ಕೋವಿಡ್ ಸಮಯದಲ್ಲಿ ನಮಗೆ ಏನೂ ಸಿಕ್ಕಿಲ್ಲ ಎಂದು ಜನರು ಬೇಸರಗೊಂಡಿದ್ದಾರೆ. ಇದರಿಂದ ಬಿಜೆಪಿಯ ವಿರುದ್ಧ ಜನರು‌ ಆಕ್ರೋಶಗೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ನಗರದಲ್ಲಿಂದು ಆಯೋಜಿಸಲಾಗಿದ್ದ ಸಭೆಯಲ್ಲಿ ಭಾಗವಹಿಸುವ ಪೂರ್ವದಲ್ಲಿ ಮಾಧ್ಯಮಕ್ಕೆ ಅವರು ಪ್ರತಿಕ್ರಿಯೆ ನೀಡಿದರು. ಜನರು ಬದಲಾವಣೆ ಮಾಡಲು ತೀರ್ಮಾನ ಮಾಡಿದ್ದಾರೆ. ಜನರ ಆಕ್ರೋಶ, ಜನರ ಧ್ವನಿ ಈ ಚುನಾವಣೆಯಲ್ಲಿ ಗೊತ್ತಾಗುತ್ತದೆ ಎಂದರು.

ಇಡಿ ದಾಳಿ ಬಗ್ಗೆ ನನಗೆ ಎಲ್ಲವೂ ಗೊತ್ತಿದೆ. ಈ ಬಗ್ಗೆ ನಾನು ಈಗ ಏನು ಮಾತನಾಡುವುದಿಲ್ಲ. ಯಡಿಯೂರಪ್ಪ ಅವರನ್ನು ಈಗಾಗಲೇ ಹೈಕಮಾಂಡ್​ ಹೇಗೆ ನಡೆಸಿಕೊಂಡು ಬಂದಿದೆ ಎಂದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಉಪಚುನಾವಣೆಯಲ್ಲಿ ಯಡಿಯೂರಪ್ಪ ಅವರ ಮಗ ರಾಜ್ಯದ ಉಪಾಧ್ಯಕ್ಷರಿದ್ದರೂ ಯಾವುದೇ ಉಸ್ತುವಾರಿ ನೀಡಿರಲಿಲ್ಲ. ಕಾರ್ಯಕರ್ತರು ಪ್ರತಿಭಟನೆ ಮಾಡಿದ ನಂತರ ಅವರನ್ನು ಉಸ್ತುವಾರಿಯಲ್ಲಿ ಸೇರಿಸಿದ್ದಾರೆ. ಅದು ಅವರ ಪಕ್ಷದ ಆಂತರಿಕ ವಿಚಾರ. ನಾನೂ ಏನೂ ಮಾತನಾಡುವುದಿಲ್ಲ ಎಂದು ವ್ಯಂಗ್ಯವಾಡಿದರು.

ಓದಿ:ಕುಮಾರಸ್ವಾಮಿಗೆ ಬುದ್ಧಿ ಭ್ರಮಣೆಯಾಗಿದೆ: ರೇಣುಕಾಚಾರ್ಯ ವಾಗ್ದಾಳಿ

ABOUT THE AUTHOR

...view details