ಧಾರವಾಡ:ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ದಲಿತ ವಿದ್ಯಾರ್ಥಿಗಳ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಮಾಡಿಕೊಂಡರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ - kannada newspaper, etvbharat, ದಲಿತ ಸಂಘ ಸಮಿತಿ, ವಿವಿಧ ಬೇಡಿಕೆ, ಆಗ್ರಹ, ಪ್ರತಿಭಟನೆ, ಧಾರವಾಡ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿದ್ಯಾರ್ಥಿ, ಮೂಲಭೂತ ಸಮಸ್ಯೆ, ಪರಿಹಾರ, ದಲಿತ ಸಂಘ ಸಮಿತಿ, ಜಿಲ್ಲಾಧಿಕಾರಿ ಕಚೇರಿ, ಸಮಾಜ ಕಲ್ಯಾಣ ಇಲಾಖೆ,
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯು, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ದಲಿತ ಸಂಘರ್ಷ ಸಮಿತಿಯು ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ
ಬೇಡಿಕೆಗಳು:
ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಹಾಸ್ಟೆಲ್ಗಳಿಗೆ ಮೂಲಭೂತ ಸೌಕರ್ಯ ನೀಡಿ ಗುಣಮಟ್ಟ ಕಾಯ್ದಿರಿಸಬೇಕು. ಈಗ ನೀಡುತ್ತಿರುವ ವಿದ್ಯಾರ್ಥಿ ವೇತನ ಹೆಚ್ಚಿಸಿ ಇಂದಿನ ಬೆಲೆ ಏರಿಕೆಗೆ ಅನುಗುಣವಾಗಿ ವಿದ್ಯಾರ್ಥಿ ವೇತನ ನೀಡಬೇಕು. ಹಳೆಯ ಹಾಸ್ಟೆಲ್ ಕಟ್ಟಡಗಳನ್ನು ನವೀಕರಿಸುವ ಬದಲಾಗಿ ಹೊಸ ವಿನ್ಯಾಸ ತಯಾರಿಸಿ ಮಾದರಿ ಕಟ್ಟಡ ನಿರ್ಮಿಸಬೇಕು, ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
.