ಹುಬ್ಬಳ್ಳಿ:ಸತತವಾಗಿ ಸುರಿದ ಮಳೆಯಿಂದ ಧಾರವಾಡ ಜಿಲ್ಲೆಯಾದ್ಯಂತ ಮನೆ ಹಾಗೂ ಬೆಳೆಗಳಿಗೆ ಹಾನಿಯಾಗಿದೆ. ಸರ್ಕಾರ ತಕ್ಷಣವೇ ಪರಿಹಾರ ನೀಡಬೇಕೆಂದು ಆಗ್ರಹಿಸಿ ಅದರಗುಂಚಿ ಗ್ರಾಮದ ರೈತರು ಪ್ರತಿಭಟನೆ ನಡೆಸಿದ್ರು.
ಮಳೆಯಿಂದ ಮನೆ-ಬೆಳೆಗೆ ಹಾನಿ: ಪರಿಹಾರ ನೀಡದ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ - ಧಾರವಾಡ ಜಿಲ್ಲೆ
ಧಾರವಾಡ ಜಿಲ್ಲೆಯಲ್ಲಿ ಸತತವಾಗಿ ಸುರಿದ ಮಳೆಯಿಂದ ಮನೆಗಳು ಸೇರಿದಂತೆ ರೈತರ ಬೆಳೆಗಳು ನಾಶವಾಗಿವೆ. ಆದ್ರೆ ಸರ್ಕಾರ ಮಾತ್ರ ಯಾವುದೇ ಪರಿಹಾರ ನೀಡಿಲ್ಲ ಎಂದು ಆರೋಪಿಸಿ ರೈತರು ಪ್ರತಿಭಟನೆ ನಡೆಸಿದ್ರು.
ರೈತರ ಪ್ರತಿಭಟನೆ
ಧಾರವಾಡ ಜಿಲ್ಲೆಯಲ್ಲಿ ಸತತವಾಗಿ ಸುರಿದ ಮಳೆಯಿಂದ ಮನೆಗಳು ಸೇರಿದಂತೆ ರೈತರು ಬೆಳೆದಂತಹ ಬೆಳೆಗಳು ನಾಶವಾಗಿವೆ. ಆದ್ರೆ ಸರ್ಕಾರ ಮಾತ್ರ ಯಾವುದೇ ಪರಿಹಾರ ನೀಡಿಲ್ಲ, ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಇದುವರೆಗೂ ಪರಿಶೀಲನೆ ನಡೆಸಿಲ್ಲ.
ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಇಲ್ಲವಾದ್ರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿ ತಹಶೀಲ್ದಾರ್ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.