ಹುಬ್ಬಳ್ಳಿ:ಇಲ್ಲಿನ ಭೈರಿದೇವರಕೊಪ್ಪದ ಬಳಿಯ ದರ್ಗಾ ತೆರವು ಕಾರ್ಯಾಚರಣೆ ಬೆಳಗ್ಗೆಯಿಂದ ಆರಂಭವಾಗಿದೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕನ್ನಡ, ಹಾವೇರಿ, ಗದಗ ಹಾಗೂ ಧಾರವಾಡ ಜಿಲ್ಲೆಗಳಿಂದ ಸುಮಾರು 200 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಸ್ಥಳದಲ್ಲಿ ನೀಯೋಜಿಸಲಾಗಿದ್ದು, ಸೂಕ್ತ ಭದ್ರತೆಯೊಂದಿಗೆ ತೆರವು ಕಾರ್ಯ ನಡೆಯುತ್ತಿದೆ. ಜಿಲ್ಲಾಧಿಕಾರಿ ಗುರದತ್ತ ಹೆಗಡೆ, ಬಿಆರ್‌ಟಿಎಸ್ ವ್ಯವಸ್ಥಾಪಕ ನಿರ್ದೇಶಕ ಎಸ್.ಭರತ್, ಪೊಲೀಸ್ ಆಯುಕ್ತ ಲಾಭೂರಾಮ್, ಡಿಸಿಪಿಗಳಾದ ಸಾಹಿಲ್ ಬಾಗ್ಲಾ, ಗೋಪಾಲಕೃಷ್ಣ ಬ್ಯಾಕೋಡ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಬಿಆರ್‌ಟಿಎಸ್ ಮಾರ್ಗ ಬದಲಾವಣೆ: ದರ್ಗಾ ತೆರವು ಕಾರ್ಯಾಚರಣೆ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಓಡಾಡುವ ವಾಹನಗಳ ಸಂಚಾರವನ್ನು ಬದಲಾವಣೆ ಮಾಡಲಾಗಿದೆ. ಧಾರವಾಡ ಕಡೆಯಿಂದ ಹುಬಳ್ಳಿಯತ್ತ ಬರುವ ವಾಹನಗಳನ್ನು ಎಪಿಎಂಸಿ ಮುಖಾಂತರ ಹುಬ್ಬಳ್ಳಿಯತ್ತ ಹಾಗೂ ಹುಬ್ಬಳ್ಳಿಯಿಂದ ಧಾರವಾಡ ಕಡೆ ಹೋಗುವ ವಾಹನಗಳನ್ನು ಬೈರಿದೇವರಕೊಪ್ಪದಿಂದ ಗಾಮನಗಟ್ಟಿ ಮಾರ್ಗವಾಗಿ ಧಾರವಾಡ ಹೋಗಲು ಮಾರ್ಗ ವ್ಯವಸ್ಥೆ ಮಾಡಲಾಗಿದೆ.