ಧಾರವಾಡ: ನಾಲ್ಕು ಜಿಲ್ಲೆಗಳ ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ಕಣದಲ್ಲಿದ್ದ ಅಭ್ಯರ್ಥಿಗಳ ಭವಿಷ್ಯವಿಂದು ಹೊರಬೀಳಲಿದೆ.
ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಮತ ಎಣಿಕೆ ಆರಂಭ - darwad latest news
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರದ ಸುತ್ತ ಬಿಗಿ-ಭದ್ರತೆ ಒದಗಿಸಲಾಗಿದೆ.
ಚುನಾವಣಾಧಿಕಾರಿ ಆದಿತ್ಯ ಆಮ್ಲಾನ್ ಬಿಸ್ವಾಸ್ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಸ್ಟ್ರಾಂಗ್ ರೂಮ್ ಓಪನ್ ಮಾಡಿದರು. ಬಳಿಕ ಚುನಾವಣಾ ಮತ ಎಣಿಕೆ ಕಾರ್ಯದ ಕುರಿತು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಪ್ರತಿಜ್ಞಾವಿಧಿ ಬೋಧಿಸಿದರು.
ಮತ ಎಣಿಕೆ ಕೇಂದ್ರಕ್ಕೆ 4 ಎಸಿಪಿ, 12 ಇನ್ಸ್ಪೆಕ್ಟರ್, 16 ಪಿಎಸ್ಐ, 31 ಎಎಸ್ಐ, 71 ಹೆಡ್ ಕಾನ್ಸ್ಟೇಬಲ್, 121 ಕಾನ್ಸ್ಟೇಬಲ್, 12 ಮಹಿಳಾ ಪೊಲೀಸರು ಸೇರಿದಂತೆ ಒಟ್ಟು 274 ಪೊಲೀಸ್ರಿಂದ ಬಂದೋಬಸ್ತ್ ಒದಗಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಉತ್ತರಕನ್ನಡ ಈ ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ನಡೆದಿತ್ತು.