ಧಾರವಾಡ:ಕೋವಿಡ್ ಸೋಂಕು ಇದ್ದರೂ, ರೋಗ ಲಕ್ಷಣ ಕಾಣದ ಹಾಗೂ ಸೌಮ್ಯ ಲಕ್ಷಣವುಳ್ಳ ಐವರಿಗೆ ತಮ್ಮ ಮನೆಗಳಲ್ಲಿಯೇ ಪ್ರತ್ಯೇಕವಾಗಿರಿಸಿ ಟೆಲಿ ಕನ್ಸಲ್ಟೇಷನ್ ಮೂಲಕ ಚಿಕಿತ್ಸೆ ಪಡೆಯುವ ಅವಕಾಶ ಕಲ್ಪಿಸಲಾಗಿದ್ದು, ಐವರು ಸ್ವಯಂ ಪ್ರೇರಣೆಯಿಂದ ಈ ಮಾದರಿಯ ಚಿಕಿತ್ಸೆ ಆಯ್ದುಕೊಂಡಿದ್ದಾರೆ.
ದೇಶದಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ, ಕೋವಿಡ್ ಸೋಂಕು ಇದ್ದರೂ ರೋಗ ಲಕ್ಷಣ ರಹಿತರು ಮನೆಗಳಲ್ಲಿದ್ದು, ಚಿಕಿತ್ಸೆ ಪಡೆಯಲು ಸರ್ಕಾರ ನಿಯಮಗಳನ್ನು ರೂಪಿಸಿದೆ. ಜಿಲ್ಲೆಯಲ್ಲಿ ಈ ಅವಕಾಶ ಜಾರಿಗೊಳಿಸಿದ ನಂತರ, ಎರಡು ದಿನಗಳಲ್ಲಿ 17 ಜನರನ್ನು ಹೋಂ ಐಸೋಲೇಷನ್ ಚಿಕಿತ್ಸೆಗೆ ಒಳಪಡಿಸಲಾಗಿದೆ.