ಕರ್ನಾಟಕ

karnataka

ETV Bharat / state

ಧಾರವಾಡ ಐಐಟಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಡಿಸಿ - ಧಾರವಾಡ ಐ.ಐ.ಟಿ

ಕಾಮಗಾರಿ ವೀಕ್ಷಣೆ ನಂತರ ಜಿಲ್ಲಾಧಿಕಾರಿಗಳು ಪ್ರಸ್ತುತ ಕಾರ್ಯನಿರ್ವಹಿಸುವ ವಾಲ್ಮಿ ಕಟ್ಟಡದ ಐಐಟಿ ಕೇಂದ್ರಕ್ಕೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಮತ್ತು ಆಡಳಿತ ಮಂಡಳಿ ಸದಸ್ಯರೊಂದಿಗೆ ಕಾಮಗಾರಿಗಳ ಪ್ರಗತಿ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಚರ್ಚಿಸಿದರು..

Dc nitesh patil
Dc nitesh patil

By

Published : Sep 26, 2020, 4:38 PM IST

ಧಾರವಾಡ: ಜಿಲ್ಲೆಯ ಐಐಟಿ (ಭಾರತೀಯ ತಂತ್ರಜ್ಞಾನ ಸಂಸ್ಥೆ) ಹಾಗೂ ಐಐಟಿ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭೇಟಿ ನೀಡಿ ರಸ್ತೆ, ಕಟ್ಟಡ ಸೇರಿ ವಿವಿಧ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿದರು.

ಐಐಟಿಯ ನೂತನ ಕ್ಯಾಂಪಸ್‍ಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಹಾಗೂ ಡಾಂಬರೀಕರಣ, ನೂತನ ಕಟ್ಟಡ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲು ಮತ್ತು ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗ ಸರ್ವೆ ಮಾಡಿ ಐಐಟಿ ನೂತನ ಕ್ಯಾಂಪಸ್‌ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಅರಣ್ಯ ಇಲಾಖೆ ಅಧಿಕಾರಿಗಳು ತುರ್ತು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಕಾಮಗಾರಿ ವೀಕ್ಷಣೆ ನಂತರ ಜಿಲ್ಲಾಧಿಕಾರಿಗಳು ಪ್ರಸ್ತುತ ಕಾರ್ಯನಿರ್ವಹಿಸುವ ವಾಲ್ಮಿ ಕಟ್ಟಡದ ಐಐಟಿ ಕೇಂದ್ರಕ್ಕೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಮತ್ತು ಆಡಳಿತ ಮಂಡಳಿ ಸದಸ್ಯರೊಂದಿಗೆ ಕಾಮಗಾರಿಗಳ ಪ್ರಗತಿ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಚರ್ಚಿಸಿದರು.

ಈ ವೇಳೆ ಐಐಟಿ ಧಾರವಾಡದ ನಿರ್ದೇಶಕ ಪ್ರೊ. ಪಿ ಶೇಷು, ಡೀನ್‍ರಾದ ಪ್ರೊ.ನಾಗೇಶ್ ಆರ್ ಐಯ್ಯರ್, ಪ್ರೊ ಎಸ್‌ಆರ್‌ಎಂ ಪ್ರಸನ್, ಪ್ರೊ. ಎಸ್ ವಿ ಪ್ರಭು, ಪ್ರೊ.ಬಿ.ಎಲ್.ತೆಂಬೆ ಮತ್ತು ರಘು ಬಾಬು, ಐ.ಐ.ಟಿಯ ಕುಲಸಚಿವ ಬಸವರಾಜಪ್ಪ ಎಸ್., ಅಧಿಕಾರಿಗಳು ಇದ್ದರು.

ABOUT THE AUTHOR

...view details