ಧಾರವಾಡ: ಗ್ರಾಮ ಪಂಚಾಯತ್ ಮೊದಲ ಹಂತದ ಚುನಾವಣೆ ಹಿನ್ನೆಲೆ ಧಾರವಾಡದಲ್ಲಿ ಮಸ್ಟರಿಂಗ್ ಕಾರ್ಯ ಆರಂಭಗೊಂಡಿದೆ. ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಲಾರಿ ನಿತೇಶ ಪಾಟೀಲ್ ಭೇಟಿ ನೀಡಿ ಪರಿಶೀಲಿಸಿದರು.
ಮಸ್ಟರಿಂಗ್ ಕೇಂದ್ರಕ್ಕೆ ಡಿಸಿ ನಿತೇಶ ಪಾಟೀಲ್ ಭೇಟಿ ಧಾರವಾಡದ ಬಾಸೆಲ್ ಮಿಷನ್ ಶಾಲೆಯಲ್ಲಿನ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ್, ಅಧಿಕಾರಿಗಳಿಗೆ ಕೊರೊನಾ ಮುಂಜಾಗ್ರತಾ ಸಾಮಗ್ರಿಗಳು, ಚುನಾವಣೆ ಮತಪೆಟ್ಟಿಗೆ, ಬ್ಯಾಲೆಟ್ ಪೇಪರ್, ಶಾಹಿ ಗುರುತಿನ ಬಾಟಲಿ ಸೇರಿದಂತೆ ಇತರೆ ಸಾಮಗ್ರಿಗಳನ್ನು ವಿತರಿಸಿದರು.
ಧಾರವಾಡ, ಅಳ್ನಾವರ, ಕಲಘಟಗಿ ತಾಲೂಕಿನ 416 ಮತಗಟ್ಟೆಗಳಲ್ಲಿ ನಾಳೆ ಮೊದಲ ಹಂತದ ಮತದಾನ ನಡೆಯಲಿದೆ. ಈ ಕುರಿತು ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಮಸ್ಟರಿಂಗ್ ಕಾರ್ಯ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಮಾತನಾಡಿ, ಒಟ್ಟು ಮೂರು ತಾಲೂಕುಗಳ ಪೈಕಿ 416 ಮತಗಟ್ಟೆಗಳಿದ್ದು, ಅದರಲ್ಲಿ ಧಾರವಾಡ ತಾಲೂಕಿಗೆ ಸಂಬಂಧಿಸಿದ 238 ಕೇಂದ್ರಗಳ ಮಸ್ಟರಿಂಗ್ ಕಾರ್ಯ ನಡೆಯುತ್ತಿದೆ. ಹೆಚ್ಚುವರಿ ಸೇರಿದಂತೆ 262 ತಂಡ ರಚನ ಮಾಡಲಾಗಿದೆ ಎಂದರು.
ಚುನಾವಣೆ ಸಂದರ್ಭದಲ್ಲಿ ಕೊರೊನಾ ನಿಯಂತ್ರಿಸಲು ಮಾಸ್ಕ್, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನಿಂಗ್ ಸಾಮಗ್ರಿಗಳನ್ನು ಮತಗಟ್ಟೆ ಕೇಂದ್ರಕ್ಕೆ ಕಳಿಸಲಾಗುತ್ತಿದೆ ಎಂದರು.