ಕಲಘಟಗಿ: ತಾಲೂಕಿನ ಗಂಜಿಗಟ್ಟಿ ಗ್ರಾಮದ ಹಿರೆಕೆರೆಯ ಸೆಳೆವಿಗೆ ಕೊಚ್ಚಿ ಹೋಗಿರುವ ಬಾಲಕಿಯ ಮನೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭೇಟಿ ನೀಡಿ, ಬಾಲಕಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
ಕೆರೆಯ ಘಟನೆ ಜರುಗಿದ ಪ್ರದೇಶಕ್ಕೆ ತೆರಳಿ ಮಾಹಿತಿ ಪಡೆದ ಡಿಸಿ, ಬಾಲಕಿಯ ಶೋಧ ಕಾರ್ಯಾಚರಣೆ ವೀಕ್ಷಿಸಿದರು. ನಂತರ ಬಾಲಕಿಯ ಮನೆಗೆ ತೆರಳಿ, ಜಿಲ್ಲಾಡಳಿತ ನಿಮ್ಮೊಂದಿಗೆ ಇದೆ ಎಂದು ಕುಟುಂಬದ ಸದಸ್ಯರಿಗೆ ಧೈರ್ಯದಿಂದ ಇರುವಂತೆ ತಿಳಿಸಿದರು.
ಕಲಘಟಗಿ: ಕೆರೆಯಲ್ಲಿ ಕೊಚ್ಚಿ ಹೋದ ಬಾಲಕಿಯ ಮನೆಗೆ ಡಿಸಿ ಭೇಟಿ - Hirekere of ganjigatti
ಹಿರೆಕೆರೆಯಲ್ಲಿ ಕೊಚ್ಚಿ ಹೋಗಿರುವ ಬಾಲಕಿಯ ಮನೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭೇಟಿ ನೀಡಿ, ಕುಟುಂಬಸ್ಥರಿಗೆ ಧೈರ್ಯದಿಂದ ಇರುವಂತೆ ತಿಳಿಸಿದರು.

DC Nitgesha patil visits ganjigatti village
ಈ ವೇಳೆ ತಹಶೀಲ್ದಾರ್ ಅಶೋಕ ಶಿಗ್ಗಾವಿ, ಸಿಪಿಐ ವಿಜಯ ಬಿರಾದಾರ ಹಾಗೂ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಇದ್ದರು. ಇನ್ನೂ ಎನ್ ಡಿ ಆರ್ ಎಫ್ ತಂಡ ಈಗಾಗಲೇ ಶೋಧ ಕಾರ್ಯಾಚರಣೆಯನ್ನು ಕೈಗೊಂಡಿದೆ.