ಧಾರವಾಡ :ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ತಾಲೂಕಿನಾದ್ಯಂತ ಭೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನು ಒಳಗೊಂಡು ಎಲ್ಲ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ನಾಳೆ (ಜ.13) ರಿಂದ ಮುಂದಿನ ಆದೇಶದವರೆಗೆ ತೆರೆಯದಂತೆ ನಿರ್ದೇಶಿಸಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಇಂದು ಆದೇಶ ಹೊರಡಿಸಿದ್ದಾರೆ.
ಕೊರೊನಾ ಅಬ್ಬರ.. ಧಾರವಾಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಆದೇಶ - ಧಾರವಾಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಆದೇಶ
ಗ್ರಾಮೀಣ ಭಾಗದ ಶಾಲೆಯಲ್ಲಿ ಸಹ ಕೊರೊನಾ ವೈರಸ್ ಕಂಡು ಬಂದಿದ್ದು, ನಾಳೆಯಿಂದ ಮುಂದಿನ ಆದೇಶದವರೆಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಇಂದು ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿ ನಿತೇಶ ಪಾಟೀಲ
ಈ ಅವಧಿಯಲ್ಲಿ ಆನ್ಲೈನ್ ಮುಖಾಂತರ ತರಗತಿಗಳನ್ನು ನಡೆಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಮೂರಂಕಿ ದಾಟಿದ ಹಿನ್ನೆಲೆಯಲ್ಲಿ ಡಿಸಿ ಅವರು ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿದ್ದಾರೆ.
ಗ್ರಾಮೀಣ ಭಾಗದ ಶಾಲೆಯಲ್ಲಿ ಸಹ ಕೊರೊನಾ ವೈರಸ್ ಕಂಡು ಬಂದಿದ್ದು, ನಾಳೆಯಿಂದ ಮುಂದಿನ ಆದೇಶದವರೆಗೆ ರಜೆ ಘೋಷಣೆ ಮಾಡಲಾಗಿದೆ.