ಹುಬ್ಬಳ್ಳಿ: ಕಳೆದ ಒಂದೆರಡು ದಿನಗಳ ಹಿಂದೆಯಷ್ಟೇ ವಾಣಿಜ್ಯನಗರಿ ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಶವವೊಂದು ಪತ್ತೆಯಾಗಿತ್ತು. ಅಪರಿಚಿತ ಶವ ಎಂದು ಸರ್ಕಾರ ನಿರ್ದೇಶನದ ಮೇರೆಗೆ ಶವ ಸಂಸ್ಕಾರ ಮಾಡಲಾಗಿತ್ತು. ಆದರೆ, ಇಂದು ಮಧ್ಯಾಹ್ನ ಬಿಡನಾಳ ರುದ್ರಭೂಮಿಯಲ್ಲಿ ಉಪವಿಭಾಗಾಧಿಕಾರಿಗಳ ಉಪಸ್ಥಿತಿಯೊಂದಿಗೆ ಮುಜಾಫರ್ ಕಲಾದಗಿ ಎಂಬುವವರ ಶವ ಹೊರ ತೆಗೆಯಲಾಯಿತು.
ಹುಬ್ಬಳ್ಳಿ: ಶವ ಹೊರತೆಗೆದು ತೋರಿಸಿದ ರುದ್ರಭೂಮಿ ಸಿಬ್ಬಂದಿ - ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಶವ ಪತ್ತೆ
ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಕೊಳೆತ ರೀತಿಯಲ್ಲಿ ಶವ ಪತ್ತೆಯಾಗಿತ್ತು. ಶವಾಗಾರದಲ್ಲಿ ಇಟ್ಟುಕೊಳ್ಳಲು ವೈದ್ಯರು ನಿರಾಕರಿಸಿದ್ದರಿಂದ ಪಾಲಿಕೆಯ ರುದ್ರಭೂಮಿಯಲ್ಲಿ ಶವಸಂಸ್ಕಾರ ಮಾಡಲಾಗಿತ್ತು.

ಶವ ಪತ್ತೆ
ನಗರದಲ್ಲಿ ಕೆಲವು ದಿನಗಳ ಹಿಂದೆ ಕೊಳೆತ ರೀತಿಯಲ್ಲಿ ಶವ ಪತ್ತೆಯಾಗಿತ್ತು. ಶವಗಾರದಲ್ಲಿ ಇಟ್ಟುಕೊಳ್ಳಲು ವೈದ್ಯರು ನಿರಾಕರಿಸಿದ್ದರಿಂದ ಪಾಲಿಕೆಯ ರುದ್ರಭೂಮಿಯಲ್ಲಿ ಶವಸಂಸ್ಕಾರ ಮಾಡಲಾಗಿತ್ತು. ಆದರೆ, ಈಗ ಏಕಾಏಕಿ ವಾರಸುದಾರರು ಆಗಮಿಸಿದ್ದರಿಂದ ಶವವನ್ನು ಹೊರತೆಗೆದು ಬಂಧುಗಳಿಗೆ ತೋರಿಸಲಾಯಿತು. ಈ ವೇಳೆ ತಹಶೀಲ್ದಾರ್ ಶಶಿಧರ ಮಾಡ್ಯಾಳ, ಪ್ರಕಾಶ ನಾಶಿ ಹಾಗೂ ಪೊಲೀಸ್ ಸಿಬ್ಬಂದಿ ಸೇರಿದಂತೆ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.