ಕರ್ನಾಟಕ

karnataka

ETV Bharat / state

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಶೇ.16 ರಷ್ಟು ಇಳಿಕೆ: ಪ್ರಹ್ಲಾದ ಜೋಶಿ

ಜಿಲ್ಲೆಯಲ್ಲಿ ಯಾವುದೇ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಲ್ಲ. ಎಮ್.ಆರ್.ಪಿ.ಸಿ, ಐ.ಒ.ಸಿ.ಎಲ್ ಮತ್ತು ಎಲ್ ಆ್ಯಂಡ್ ಟಿ ಕಂಪನಿಗಳು ಜಿಲ್ಲೆಗಳಿಗೆ ಆಕ್ಸಿಜನ್ ಪ್ಲಾಂಟ್‍ಗಳನ್ನು ಕೊಡುಗೆ ನೀಡಲಾಗಿದ್ದು ಸದ್ಯದಲ್ಲಿ ಭೂಮಿ ಪೂಜೆ ಮಾಡಿ ಅವುಗಳನ್ನು ಕಾರ್ಯಾರಂಭ ಮಾಡಲಾಗುವುದು ಎಂದು ಪ್ರಹ್ಲಾದ ಜೋಶಿ ತಿಳಿಸಿದರು.

Statement of Union Minister Pralhad Joshi
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ

By

Published : May 30, 2021, 9:40 AM IST

ಧಾರವಾಡ:ಕೋವಿಡ್-19 ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿತ್ತು. ಇದರ ಪರಿಣಾಮವಾಗಿ ಜಿಲ್ಲೆಯಲ್ಲಿ ಕೊವೀಡ್ ಪ್ರಕರಣಗಳು ಕಡಿಮೆಯಾಗಿದ್ದು, ಜಿಲ್ಲೆಯಲ್ಲಿ ಕೊವೀಡ್ ಪಾಸಿಟಿವಿಟಿ ರೇಟ್ ಶೇ.16 ರಷ್ಟು ಇಳಿಕೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ನಗರದ ಸರ್ಕ್ಯೂಟ್‌ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 34 ಕೋವಿಡ್ ಕೇರ್ ಸೆಂಟರ್​ಗಳನ್ನು ಆರಂಭಿಸಲಾಗಿದ್ದು, 14 ನಗರ ಪ್ರದೇಶಗಳಲ್ಲಿ ಮತ್ತು 20 ಗ್ರಾಮೀಣ ಪ್ರದೇಶಗಳಲ್ಲಿ ಆರಂಭವಾಗಿವೆ. ಕೋವಿಡ್ ಸೋಂಕು ಹರಡುವಿಕೆ ನಿಧಾನವಾಗಿ ಕಡಿಮೆಯಾಗುತ್ತಿದ್ದು ಜಿಲ್ಲೆಯಲ್ಲಿ ಪರಿಸ್ಥಿತಿ ಸುಧಾರಿಸಿದೆ ಎಂದರು.

ಕಿಮ್ಸ್ ಆಸ್ಪತ್ರೆಯನ್ನು ಒಳಗೊಂಡಂತೆ ವಿವಿಧ ಆಸ್ಪತ್ರೆಗಳಲ್ಲಿ ಒಟ್ಟು 2400 ಬೆಡ್ ಗಳಿದ್ದು, 1990 ಬೆಡ್‌ಗಳಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು 410 ಬೆಡ್‍ಗಳು ಖಾಲಿ ಇವೆ. ಜಿಲ್ಲೆಯಲ್ಲಿ ಈಗಾಗಲೇ ಬೆಡ್ ಮತ್ತು ವೆಂಟಿಲೇಟರ್​ಗಳ ಕುರಿತ ಒತ್ತಡ ಕಡಿಮೆಯಾಗುತ್ತಿದೆ.

ಜಿಲ್ಲೆಯಲ್ಲಿ ಯಾವುದೇ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಲ್ಲ. ಎಮ್.ಆರ್.ಪಿ.ಸಿ, ಐ.ಒ.ಸಿ.ಎಲ್ ಮತ್ತು ಎಲ್ ಆ್ಯಂಡ್ ಟಿ ಕಂಪನಿಗಳು ಜಿಲ್ಲೆಗಳಿಗೆ ಆಕ್ಸಿಜನ್ ಪ್ಲಾಂಟ್‍ಗಳನ್ನು ಕೊಡುಗೆ ನೀಡಲಾಗಿದ್ದು ಸದ್ಯದಲ್ಲಿ ಭೂಮಿ ಪೂಜೆ ಮಾಡಿ ಅವುಗಳನ್ನು ಕಾರ್ಯಾರಂಭ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಮಾತನಾಡಿ, ಆಕ್ಸಿಜನ್ ಸಮಸ್ಯೆಯನ್ನು ಸರಿ ಮಾಡಲು ಪ್ರಯತ್ನಿಸುತ್ತಿದ್ದೇವೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಕಡಿಮೆಯಾಗುತ್ತಿದೆ ಹೀಗಾಗಿ ಮುಂದೆ ಆಕ್ಸಿಜನ್ ಕೊರತೆ ಕಂಡುಬರುವುದಿಲ್ಲ. ರಾಜ್ಯಕ್ಕೆ ಅಗತ್ಯವಿರುವಷ್ಟು ಆಮ್ಲಜನಕದ ಸರಬರಾಜು ಪ್ರತಿದಿನ ಆಗುತ್ತಿದೆ ಎಂದು ಸಚಿವರು ಹೇಳಿದರು.

ಕಿರಾಣಿ ವ್ಯಾಪಾರಸ್ಥರ ಬೇಡಿಕೆಯ ಆಧಾರದ ಮೇಲೆ ಮೂರು ದಿನ ಬೆಳಗ್ಗೆ 6 ರಿಂದ 12 ಗಂಟೆವರೆಗೆ ವ್ಯಾಪಾರಕ್ಕಾಗಿ ಅವಕಾಶ ಮಾಡಲಾಗಿದೆ. ಜನಸಂದಣಿಯನ್ನು ನಿಯಂತ್ರಿಸುಲು ನಿರ್ಧಿಷ್ಟ ಅವಧಿಯನ್ನು ನೀಡಲಾಗಿದೆ. ಸರ್ಕಾರದ ಎಲ್ಲ ಮಾರ್ಗಸೂಚಿಗಳ ಹೊರತಾಗಿಯೂ ಸಾರ್ವಜನಿಕರು ಕೋವಿಡ್ ನಿಯಂತ್ರಣಕ್ಕಾಗಿ ಸ್ವಯಂ ನಿಯಂತ್ರಣ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.

For All Latest Updates

ABOUT THE AUTHOR

...view details