ಹುಬ್ಬಳ್ಳಿ: ಎರಡು ವರ್ಷಗಳ ಕಾಲ ಧಾರವಾಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ದೀಪಾ ಚೋಳನ್ ಇಂದು ವರ್ಗಾವಣೆಯಾಗಿದ್ದು, ಜಿಲ್ಲೆಯ ಜನರಿಗೆ ಧನ್ಯವಾದ ಹೇಳಿದ್ದಾರೆ.
ಧಾರವಾಡ ಜಿಲ್ಲೆಯ ಜನತೆಗೆ ಧನ್ಯವಾದ ಹೇಳಿದ ನಿರ್ಗಮಿತ ಜಿಲ್ಲಾಧಿಕಾರಿ ದೀಪಾ ಚೋಳನ್ - Transfer of Deepa Cholan
ಶಿಕ್ಷಣ ಇಲಾಖೆಗೆ ವರ್ಗಾವಣೆಯಾಗಿರುವ ಧಾರವಾಢ ಜಿಲ್ಲಾಧಿಕಾರಿ ದೀಪಾ ಚೋಳನ್, ಎರಡು ವರ್ಷಗಳ ಕಾಲ ಕಾರ್ಯನಿರ್ವಹಿಸಲು ಸಹಕಾರ ನೀಡಿದ ಜಿಲ್ಲೆಯ ಜನತೆಗೆ ಧನ್ಯವಾದ ತಿಳಿಸಿದ್ದಾರೆ.
ಧಾರವಾಡ ಜಿಲ್ಲೆಯ ಜನತೆಗೆ ಧನ್ಯವಾದ ಹೇಳಿದ ದೀಪಾ ಚೋಳನ್
ನಗರದಲ್ಲಿ ಸಚಿವರಿಂದ ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿದ ಅವರು, ನನ್ನ ಎರಡು ವರ್ಷದ ಕಾರ್ಯಾವಧಿಯಲ್ಲಿ ಜಿಲ್ಲೆಯ ಜನರು, ಅಧಿಕಾರಿಗಳು, ರಾಜಕೀಯ ಮುಖಂಡರು ಉತ್ತಮ ಸಹಕಾರ ನೀಡಿದ್ದಾರೆ. ಇದೀಗ ಬೆಂಗಳೂರಿನ ಸರ್ವ ಶಿಕ್ಷಣ ಅಭಿಯಾನ ಇಲಾಖೆಗೆ ವರ್ಗಾವಣೆಗೊಂಡಿದ್ದು, ಅಲ್ಲಿಗೆ ತೆರಳುತ್ತಿದ್ದೇನೆ ಎಂದರು.
ಕೆಲ ಮಹಿಳಾ ಸಂಘಟನೆಗಳು ನನ್ನ ವರ್ಗಾವಣೆಯನ್ನು ವಿರೋಧಿಸಿವೆ. ಯಾರೂ ಈ ವಿಚಾರದಲ್ಲಿ ವಿರೋಧ ವ್ಯಕ್ತಪಡಿಸಬಾರದು. ಸರ್ಕಾರದ ಆದೇಶಕ್ಕೆ ತಲೆ ಬಾಬೇಕಾಗಿರುವುದು ನಮ್ಮ ಕರ್ತವ್ಯ. ನನಗೆ ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಕರಿಸಿದ ಜಿಲ್ಲೆಯ ಜನತೆಗೆ ಧನ್ಯವಾದಗಳು ಎಂದರು.