ಧಾರವಾಡ: ಮತಗಟ್ಟೆ ಮಟ್ಟದ ಅಧಿಕಾರಿಯ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸದೇ ಕರ್ತವ್ಯ ಲೋಪವೆಸಗಿದ ಸಚಿನ್ ನಾಯ್ಕ ಎಂಬುವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.
ಕರ್ತವ್ಯ ಲೋಪ: ಮತಗಟ್ಟೆ ಮಟ್ಟದ ಅಧಿಕಾರಿ ಅಮಾನತು - ಸರ್ಕಾರಿ ಸೇವೆ
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ, ಮನೆ ಮನೆ ಸಮೀಕ್ಷೆ ಕಾರ್ಯದಲ್ಲಿ ಬೇಜವಾಬ್ದಾರಿತನ ತೋರಿದ್ದ ಮತಗಟ್ಟೆ ಮಟ್ಟದ ಅಧಿಕಾರಿಯನ್ನು ಕೆಲಸದಿಂದ ವಜಾಗೊಳಿಸುವಂತೆ ಡಿಸಿ ಆದೇಶಿಸಿದ್ದಾರೆ.
ಕೆಲಸದಲ್ಲಿ ಬೇಜವಾಬ್ದಾರಿ: ಸರ್ಕಾರಿ ಕೆಲಸದಿಂದ ವಜಾ
ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಶಹರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದ ದ್ವಿತೀಯ ದರ್ಜೆ ಸಹಾಯಕ ಸಚಿನ್ ನಾಯ್ಕ ಅವರು ಮತಗಟ್ಟೆ ಮಟ್ಟದ ಅಧಿಕಾರಿಯ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸದೇ ಕರ್ತವ್ಯ ಲೋಪವೆಸಗಿದ್ದು ಅವರನ್ನು ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ಇಲಾಖಾ ವಿಚಾರಣೆ ಬಾಕಿ ಇರಿಸಿ, ಸರ್ಕಾರಿ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಹುಬ್ಬಳ್ಳಿ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
Last Updated : Dec 7, 2022, 11:05 AM IST