ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ: ಮೂವರು ಹೆದ್ದಾರಿ ಸುಲಿಗೆಕೋರರ ಬಂಧನ - ಹೆದ್ದಾರಿ ಸುಲಿಗೆಕೋರರ ಬಂಧನ

ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ಮೂವರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

hubli
ಹುಬ್ಬಳ್ಳಿಯಲ್ಲಿ ಮೂವರು ಹೆದ್ದಾರಿ ಸುಲಿಗೆಕೋರರ ಬಂಧನ

By

Published : May 6, 2021, 7:46 AM IST

ಹುಬ್ಬಳ್ಳಿ: ಹೆದ್ದಾರಿಯಲ್ಲಿ ವಾಹನ ಸವಾರರನ್ನು ತಡೆದು ಮಾರಕಾಸ್ತ್ರ ಹಾಗೂ ಪಿಸ್ತೂಲ್ ತೋರಿಸಿ ಹಣ ವಸೂಲಿ ಮಾಡುತ್ತಿದ್ದ ಮೂವರು ಸುಲಿಗೆಕೋರರನ್ನು ಬಂಧಿಸುವಲ್ಲಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಸೆಟ್ಲಮೆಂಟ್ ನಿವಾಸಿ ಶ್ರೀನಿವಾಸ ತಿರುಪತಿ, ಸಿದ್ಧಾರ್ಥ್ ನವಲಗುಂದ, ಸುಧಾಕರ್ ಗಬ್ಬೂರ ಬಂಧಿತ ಆರೋಪಿಗಳು.

ಇವರು ಕಳೆದ ಮೂರು ದಿನಗಳ ಹಿಂದೆ ಹುಬ್ಬಳ್ಳಿಯ ಬೆಳಗಲಿ ಕ್ರಾಸ್ ಬಳಿಯಲ್ಲಿ ರಾತ್ರಿ ವೇಳೆ ಶಿರಾಜ್ ಕೋಳೂರ ಹಾಗೂ ಆತನ ಸ್ನೇಹಿತರಿಗೆ ಚಾಕುವಿನಿಂದ ಹಲ್ಲೆ ಮಾಡಿ, ಗನ್ ತೋರಿಸಿ ಹಣ ದೋಚಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಮೂವರು ಸುಲಿಗೆಕೋರರನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಸುದ್ದಿಗೋಷ್ಠಿ

ಸದ್ಯ ಬಂಧಿತರಿಂದ ಒಂದು ಬುಲೆಟ್ ಬೈಕ್, 7,500ರೂ ನಗದು ಸೇರಿದಂತೆ ಒಂದು ಏರ್ ಗನ್, ಒಂದು ಚಾಕು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತ ಆರೋಪಿಗಳ ಪೈಕಿ ಒಬ್ಬ ರೌಡಿಶೀಟರ್ ಇರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಈ ಕುರಿತು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ರಾತ್ರಿ ವೇಳೆ ಹೈವೇಯಲ್ಲಿ ಕಳ್ಳತನ ಮಾಡುತ್ತಿದ್ದ ದರೋಡೆಕೋರರ ಗುಂಪನ್ನು ಬಂಧಿಸಲಾಗಿದೆ. ಖಚಿತ ಮಾಹಿತಿ ಲಭ್ಯವಾದ ಬೆನ್ನಲ್ಲೇ ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಸಾರ್ವಜನಿಕರ ಭಯಪಡದೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ABOUT THE AUTHOR

...view details