ಧಾರವಾಡ: ಈಜಲು ಹೋದ ಬಾಲಕರಿಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ.
ಗರಗ ಗ್ರಾಮದ ಆಧಿನಾಥ ಸಂಗೊಳ್ಳಿ (13) ಹಾಗೂ ಸುಭಾಸ ಸಂಗೊಳ್ಳಿ (13) ಮೃತ ಬಾಲಕರು. ಗ್ರಾಮದ ಪಕ್ಕದಲ್ಲಿರುವ ಕೆರೆಗೆ ಈಜಲು ಹೋದ ವೇಳೆ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಧಾರವಾಡ: ಈಜಲು ಹೋದ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಸಾವು - ಬಾಲಕರು ನೀರುಪಾಲು
ಬಾಲಕರಿಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ.
ಕೆರೆಯಲ್ಲಿ ಮುಳುಗಿದ ಬಾಲಕರು
ಸುದ್ದಿ ತಿಳಿದ ತಕ್ಷಣ ಸ್ಥಳೀಯರು ಸ್ಥಳಕ್ಕಾಗಮಿಸಿ ಬಾಲಕರನ್ನು ಮೇಲಕ್ಕೇತಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.