ಧಾರವಾಡ:ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯಲು ಲಾಕ್ಡೌನ್ ಮಾಡಲಾಗಿದೆ. ಈ ಅವಧಿಯಲ್ಲಿ ರೈತರು ಮುಂಗಾರು ಪೂರ್ವ ಚಟುವಟಿಕೆ ಚುರುಕುಗೊಳಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ರೈತ ಸಮುದಾಯಕ್ಕೆ ನೆರವು ನೀಡಲು ಧಾರವಾಡ ಕೃಷಿ ವಿಶ್ವವಿದ್ಯಾಲಯ ಮುಂದಾಗಿದೆ.
ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕೃವಿವಿ ಅಗ್ರಿ ವಾರ್ ರೂಮ್ ಸ್ಥಾಪಿಸಿ ನೆರವು ನೀಡುತ್ತಿದೆ. ಈ ಲಾಕ್ಡೌನ್ ಅವಧಿಯಲ್ಲಿ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಸಿಗದೇ ಬೆಳೆಗಳನ್ನು ಹಾಳು ಮಾಡಿಕೊಳ್ಳುತ್ತಿದೆ. ಕೃವಿವಿ ಅಗ್ರಿ ವಾರ್ ರೂಮ್ ಸ್ಥಾಪಿಸಿ ರೈತರಿಗೆ ಸಲಹೆ ಸೂಚನೆ ನೀಡುವ ಉದ್ದೇಶದಿಂದ ಈ ವ್ಯವಸ್ಥೆ ಮಾಡಿ ರೈತರಿಗೆ ಅನುಕೂಲ ಮಾಡಿಕೊಟ್ಟಿದೆ.