ಧಾರವಾಡ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್‌ಗಾಗಿ ಪೈಪೋಟಿ ಜೋರಾಗಿದೆ. ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಹಾಲಿ ಶಾಸಕರಿರುವಾಗಲೇ ಆಕಾಂಕ್ಷಿಗಳು ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ. ಬಿಜೆಪಿ ಟಿಕೆಟ್‌ಗಾಗಿ ಪಕ್ಷದೊಳಗೇ ಪೈಪೋಟಿ ನಡೆಯುತ್ತಿದೆ. ತವಣಪ್ಪ ಅಷ್ಟಗಿ ಹಾಗೂ ಅಮೃತ್ ದೇಸಾಯಿ ನಡುವೆ ಟಿಕೆಟ್ ಗಿಟ್ಟಿಸಿಕೊಳ್ಳಲು ಸ್ಪರ್ಧೆ ಇದೆ. ಈ ಬಾರಿ ಟಿಕೆಟ್ ಕೊಡ್ತಾರೆ ಎಂಬ ಭರವಸೆಯಲ್ಲಿ ಬಯಲು ಸೀಮೆ ಪ್ರಾಧಿಕಾರದ ಅಧ್ಯಕ್ಷ ತವಣಪ್ಪ ಅಷ್ಟಗಿ ಹಾಗೂ ಧಾರವಾಡ ಗ್ರಾಮೀಣ ಶಾಸಕ ಅಮೃತ್ ದೇಸಾಯಿ ಇದ್ದಾರೆ.
ನಿಗಮದ ಅಧ್ಯಕ್ಷ ತವಣಪ್ಪ ಅಷ್ಟಗಿ ಬಿಜೆಪಿ ಸರ್ವೇಯಲ್ಲಿ ನನ್ನ ಹೆಸರೇ ಮೊದಲಿದ್ದು ನನಗೆ ಟಿಕೆಟ್ ಸಿಗುತ್ತದೆ ಎಂದು ಹೇಳುತ್ತಿದ್ದಾರೆ. ಇತ್ತ ಹಾಲಿ ಶಾಸಕ ಅಮೃತ್ ದೇಸಾಯಿ ನಮ್ಮಲ್ಲಿ ಯಾವುದೇ ಸರ್ವೇೆಗಳು ನಡೆದಿಲ್ಲ. ಟಿಕೆಟ್ ಯಾರಿಗೆ ನೀಡಬೇಕು ಎಂಬುವುದನ್ನು ಹೈಕಮಾಂಡ್ ಡಿಸೈಡ್ ಮಾಡಲಿದೆ. ಯಾರಿಗೆ ಬೇಕಾದರೂ ಟಿಕೆಟ್ ನೀಡುವ ಹಕ್ಕು ಅವರಿಗಿದೆ. ಯಾರಿಗೆ ಟಿಕೆಟ್ ನೀಡುತ್ತಾರೋ ಅವರನ್ನು ಗೆಲ್ಲಿಸುವ ಕೆಲಸವನ್ನು ನಾವೆಲ್ಲರೂ ಮಾಡುತ್ತೇವೆ ಎಂದು ಒಗ್ಗಟ್ಟು ಪ್ರದರ್ಶಿಸಿದರು.
ಈಗಾಗಲೇ ಜನರಲ್ಲಿ ನಮ್ಮ ಅಡಳಿತದ ಬಗ್ಗೆ ವಿಶ್ವಾಸವಿದೆ. ಮತ್ತೊಮ್ಮೆ ಬಿಜೆಪಿ ನಾಯಕರು ನನಗೆ ಟಿಕೆಟ್ ನೀಡುವ ಭರವಸೆಯಿದೆ ಎಂದು ಅಮೃತ್ ದೇಸಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇವರಿಬ್ಬರ ಟಿಕೆಟ್ ವಾರ್ ಜೋರಾಗಿರುವಾಗಲೇ ಮಾಜಿ ಶಾಸಕಿ ಸೀಮಾ ಮಸೂತಿ ಕೂಡ ನಾನು ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ನನಗೂ ಸ್ಪರ್ಧೆಗೆ ಅವಕಾಶ ಸಿಗಬಹುದು ಎಂದು ಕಾದು ಕುಳಿತಿದ್ದಾರೆ.