ಕರ್ನಾಟಕ

karnataka

ETV Bharat / state

ಧಾರವಾಡ ಕಟ್ಟಡ ಕುಸಿತ ಪ್ರಕರಣ: ಮೃತರ ಸಂಖ್ಯೆ 5ಕ್ಕೆ , 55 ಮಂದಿ ರಕ್ಷಣೆ - dwd buiding colapse-bindu

ಧಾರವಾಡ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಐದು ಜನರು ಸಾವನ್ನಪ್ಪಿದು, 55 ಜನರನ್ನು ರಕ್ಷಣೆ ಮಾಡಲಾಗಿದೆ.

ಕಟ್ಟಡ ಕುಸಿತದಲ್ಲಿ ಮೃತಪಟ್ಟವರು

By

Published : Mar 20, 2019, 1:55 PM IST

ಧಾರವಾಡ: ಕಟ್ಟಡ ಕುಸಿತ ಪ್ರಕರಣದಲ್ಲಿ ಐದು ಜನ ಮೃತಪಟ್ಟಿದ್ದು, 55 ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸ್ ಮಹಾ ನಿರ್ದೇಶಕ ಎನ್.ಎಂ.ರೆಡ್ಡಿ ಅಧಿಕೃತ ಮಾಹಿತಿ ನೀಡಿದರು.

ನಗರದ ಎಸ್.ಪಿ. ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಅಂದಾಜಿನ ಪ್ರಕಾರ ಕಟ್ಟಡದ ತಳಭಾಗದಲ್ಲಿ 15-20 ಜನ ಸಿಲುಕಿಕೊಂಡಿದ್ದಾರೆ. ರಾಜ್ಯದಿಂದ ಎಸ್​​​ಡಿಆರ್​​​ಎಫ್ ಹಾಗೂ ಕೇಂದ್ರದಿಂದ ಎನ್ ಡಿಆರ್​​ಎಫ್ ತಂಡವನ್ನು ಕರೆಸಲಾಗಿದ್ದು, ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾರ್ಯಾಚರಣೆಗೂ ಒಂದು ಪದ್ಧತಿ ಇದ್ದು, ಅದರ ಪ್ರಕಾರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದರು.

ಪೊಲೀಸ್ ಮಹಾ ನಿರ್ದೇಶಕ ಎನ್.ಎಂ.ರೆಡ್ಡಿ ಸುದ್ದಿಗೋಷ್ಠಿ

ಕಟ್ಟಡದ ಅವಶೇಷಗಳ ನಾಲ್ಕು ಕಡೆಗಳಲ್ಲಿ ಜನ ಇದ್ದಾರೆ ಎಂಬ ಕುರುಹು ಸಿಕ್ಕಿದೆ. ಅವರನ್ನು ರಕ್ಷಣೆ ಮಾಡುವುದು ನಮ್ಮ ಮೊದಲ ಕರ್ತವ್ಯ ಎಸ್​​ಡಿಆರ್​​​ಎಫ್ ನಿಂದ 45 ಜನ, ಎನ್​​​ಡಿಆರ್​​​ಎಫ್ ನಿಂದ 110 ಜನ, 8 ರಕ್ಷಣಾ ತಂಡ ಕಾರ್ಯಾಚರಣೆ ಮಾಡುತ್ತಿವೆ. 230 ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿಯಿಡೀ ಕಾರ್ಯಾಚರಣೆ ಮಾಡಿದ್ದಾರೆ.

ನಿನ್ನೆ ರಾತ್ರಿ ಕಟ್ಟಡದ ಮಾಲೀಕರ ಮೇಲೆ 304 ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದ್ದು, ಅದಕ್ಕಾಗಿ ಒಂದು ತಂಡ ರಚನೆ ಮಾಡಿ ಸದ್ಯದಲ್ಲೇ ಅವರನ್ನು ಬಂಧಿಸಲಿದ್ದೇವೆ ಎಂದರು.ಈ ಕಟ್ಟಡ ಕಾರ್ಯಾಚರಣೆಯಲ್ಲಿ ಪ್ರತಿಯೊಂದು ಸವಾಲಾಗುತ್ತಿವೆ. ಕೊನೆಯ ವ್ಯಕ್ತಿಯನ್ನು ರಕ್ಷಣೆ ಮಾಡುವವರೆಗೂ ಕಾರ್ಯಾಚರಣೆ ಮುಂದುವರೆಯಲಿದೆ ಎಂದರು.

ಹುಬ್ಬಳ್ಳಿ, ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ, ಜಿಲ್ಲಾಧಿಕಾರಿ ದೀಪಾ ಚೋಳನ್, ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಡಿಐಜಿ ರವಿಕಾಂತೇಗೌಡ ಹಾಗೂ ಎಸ್​​ಪಿ ಸಂಗೀತಾ ಜಿ ಸುದ್ದಿಗೋಷ್ಠಿಯಲ್ಲಿದ್ದರು.

For All Latest Updates

ABOUT THE AUTHOR

...view details