ಧಾರವಾಡ: ಮತದಾರರ ಪಟ್ಟಿ ಪರಿಶೀಲನೆ ಮತ್ತು ಪರಿಷ್ಕರಣೆ ಕಾರ್ಯದ ಕುರಿತು ಧಾರವಾಡ ಆಕಾಶವಾಣಿ ಕೇಂದ್ರದಲ್ಲಿ ನಡೆದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್ ಭಾಗವಹಿಸಿ ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಧಾರವಾಡ ಡಿಸಿಯಿಂದ ಫೋನ್ ಇನ್ ಕಾರ್ಯಕ್ರಮ: ಸಂದೇಹ ಬಗೆಹರಿಸಿಕೊಂಡ ಜನ - ಧಾರವಾಡ ಆಕಾಶವಾಣಿ ಕೇಂದ್ರದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ
ಮತದಾರರ ಪಟ್ಟಿ ಪರಿಶೀಲನೆ ಮತ್ತು ಪರಿಷ್ಕರಣೆ ಕಾರ್ಯದ ಕುರಿತು ಧಾರವಾಡ ಆಕಾಶವಾಣಿ ಕೇಂದ್ರದಲ್ಲಿ ನಡೆದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಡಿಸಿ ದೀಪಾ ಚೋಳನ್ ಭಾಗಿಯಾಗಿ ಕೇಳುಗರ ಪ್ರಶ್ನೆಗೆ ಉತ್ತರಿಸಿದರು.
ಧಾರವಾಡ ಡಿಸಿ ಫೋನ್ ಇನ್ ಕಾರ್ಯಕ್ರಮ
ಹಳೆ ಹುಬ್ಬಳ್ಳಿ, ಧಾರವಾಡ, ಹುಬ್ಬಳ್ಳಿ, ಬೆಳಗಾವಿ ಜಿಲ್ಲೆಯ ಗೋಕಾಕ್, ರಾಯಬಾಗ, ಕಲಘಟಗಿ ತಾಲೂಕಿನ ದೇವರಗುಡಿಹಾಳ, ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ, ಇಂಡಿ ಮತ್ತಿತರ ಭಾಗಗಳಿಂದ ಕೇಳುಗರು ಕರೆ ಮಾಡಿ ಮತದಾರರ ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಹೆಸರು ಸೇರ್ಪಡೆ ಮತ್ತಿತರ ವಿಷಯಗಳ ಕುರಿತು ತಮ್ಮ ಸಂದೇಹಗಳನ್ನು ಪರಿಹರಿಸಿಕೊಂಡರು.
ಜಿಲ್ಲಾಧಿಕಾರಿ ಜೊತೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾಗಿರುವ ಜಿಪಂ ಸಿಇಒ ಡಾ. ಬಿ.ಸಿ.ಸತೀಶ್ ಹಾಜರಿದ್ದರು. ಆಕಾಶವಾಣಿ ಕೇಂದ್ರದ ಸಹಾಯಕ ನಿರ್ದೇಶಕ ಸತೀಶ್ ಬಿ. ಪರ್ವತೀಕರ್ ಕಾರ್ಯಕ್ರಮ ನಿರ್ವಹಿಸಿದರು.