ಧಾರವಾಡ:ಜಿಲ್ಲೆಯ ಕೊರೊನಾ ನಿಯಂತ್ರಣಕ್ಕಾಗಿ ಆಂಬ್ಯುಲೆನ್ಸ್ ನಿರ್ವಹಣೆ ಹಾಗೂ ಖಾಸಗಿ ಆಸ್ಪತ್ರೆಯ ಹಾಸಿಗೆ ಸಂಖ್ಯೆಗಳ ನಿರ್ವಹಣೆಗೆ ಪ್ರತ್ಯೇಕ ತಂಡಗಳನ್ನು ರಚಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಆಂಬ್ಯುಲೆನ್ಸ್ ನಿರ್ವಹಣೆ ತಂಡ
ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಕೋವಿಡ್ ಸೋಂಕಿತರನ್ನು ಸ್ಥಳಾಂತರಿಸಲು ಭೂ ದಾಖಲೆಗಳ ಉಪನಿರ್ದೇಶಕಿ ನಜ್ಮಾ ಪೀರಜಾದೆ - 9341015656, ಮಹಾನಗರ ಪಾಲಿಕೆ ಉಪ ಆಯುಕ್ತ ಶಂಕರಾನಂದ ಬನಶಂಕರಿ - 9242014944 ಅವರನ್ನು ಸಂಪರ್ಕಿಸಬಹುದು. ಜಿಲ್ಲೆಯ ಉಳಿದ ತಾಲೂಕುಗಳಲ್ಲಿ ಅಲ್ಲಿನ ತಹಶೀಲ್ದಾರ್ ಅವರನ್ನು ಸಂಪರ್ಕಿಸಬಹುದು.
ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಲಭ್ಯತೆ ಕುರಿತ ಮಾಹಿತಿಗೆ
ಹೆಸ್ಕಾಂ ಪ್ರಧಾನ ವ್ಯವಸ್ಥಾಪಕ ಇಬ್ರಾಹಿಂ ಮೈಗೂರ - 9986716666, ಡಿಮ್ಹಾನ್ಸ್ ಮುಖ್ಯ ಆಡಳಿತಾಧಿಕಾರಿ ಷಣ್ಮುಖ - 8105077333, ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಎಸ್.ಎಂ. ಹೊನಕೇರಿ - 8277332970 ಅವರನ್ನು ಸಂಪರ್ಕಿಸಬಹುದು.
ಲಕ್ಷಣ ರಹಿತ ಕೋವಿಡ್ ಸೋಂಕಿತರಿಗಾಗಿ ಕೋವಿಡ್ ಕೇರ್ ಸೆಂಟರ್ಗಳ ಮಾಹಿತಿಗೆ
ಜಿಲ್ಲೆಯಲ್ಲಿ ದಾಖಲಾಗುವ ಲಕ್ಷಣ ರಹಿತ ಕೊರೊನಾ ಸೋಂಕಿತರಿಗಾಗಿ ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್ - 9448821093, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಎನ್.ಆರ್. ಪುರುಷೋತ್ತಮ - 9844844989, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಜಪ್ಪ ಸೊಗಲದ - 9901418289 ಅಥವಾ ಜಿಲ್ಲಾಧಿಕಾರಿ ಕಚೇರಿಯ ಕಂಟ್ರೋಲ್ ರೂಮ್ 1077 (0836), 0836-2445666, ವಾಟ್ಸಾಪ್ ಸಂಖ್ಯೆಗಳಾದ - 9449847646 ಅಥವಾ 9449847641 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.