ಕರ್ನಾಟಕ

karnataka

ETV Bharat / state

ಧಾರವಾಡ ಪರಿಸ್ಥಿತಿ ನಿಯಂತ್ರಿಸಿ ಹಸಿರು ವಲಯಕ್ಕೆ ತನ್ನಿ ಅಧಿಕಾರಿಗಳಿಗೆ ಸಿಎಂ ಸೂಚನೆ - fully informed CM

ವಿಡಿಯೋ ಕಾನ್ಫರೆನ್ಸ್ ಮೂಲಕ ಧಾರವಾಡ ಜಿಲ್ಲೆಯಲ್ಲಿ ಕೊರೊನಾಗೆ ಸಂಬಂಧಿಸಿದಂತೆ ಮತ್ತು ಇನ್ನಿತರ ಕೆಲಸಗಳ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪೂರ್ಣ ಮಾಹಿತಿ ಪಡೆದುಕೊಂಡರು.

Dharwad district is fully informed CM through video conference
ಸಿಎಂ ವಿಡಿಯೋ ಕಾನ್ಫರೆನ್ಸ್

By

Published : Apr 28, 2020, 9:14 AM IST

ಧಾರವಾಡ: ಜಿಲ್ಲೆಯನ್ನು ಗ್ರೀನ್ ಝೋನ್ ತರಲು ಜಿಲ್ಲಾಡಳಿತವು ಸೋಂಕಿತರ ಪ್ರದೇಶದಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಬೇಕು. ಹೊಸಬರಿಗೆ ಸೋಂಕು ಹರಡಲು ಆಸ್ಪದ ನೀಡಬಾರದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಡಿಸಿ, ಪೊಲೀಸ್ ಆಯುಕ್ತರು, ಎಸ್‍ಪಿ ಮತ್ತು ಸಿಇಓ ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ ಸಿಎಂ ಧಾರವಾಡ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ನಿಯಂತ್ರಣ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು.

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಮಾತನಾಡಿ, ಜಿಲ್ಲೆಯಲ್ಲಿ ಆಸ್ಟ್ರೇಲಿಯಾದಿಂದ ದುಬೈ ಮಾರ್ಗವಾಗಿ ಒಬ್ಬ ವ್ಯಕ್ತಿ ಹಾಗೂ ದೆಹಲಿಯಿಂದ ಮರಳಿದ ಮತ್ತೋರ್ವರಿಂದ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಜಿಲ್ಲಾಡಳಿತ ಪೊಲೀಸ್ ಆರೋಗ್ಯ ಇಲಾಖೆಯು ಪ್ರಯತ್ನದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿಯೂ ಪರಿಶೀಲನೆ ನಡೆಸಲಾಗುತ್ತಿದೆ. ಎಲ್ಲಿಯೂ ಯಾವುದೇ ರೀತಿಯ ತೊಂದರೆ ಇಲ್ಲ. ಗ್ರಾಮೀಣ ಭಾಗದಲ್ಲಿ ಹಂತ ಹಂತವಾಗಿ ಆರ್ಥಿಕ ಚಟುವಟಿಕೆ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ದೀಪಾ ಚೋಳನ ಮಾತನಾಡಿ, ಜಿಲ್ಲೆಯಲ್ಲಿ ದುರ್ಬಲ ಆರೋಗ್ಯವಿರುವವರ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಬಿಪಿ, ಶುಗರ್, ಡಯಾಲಿಸಿಸ್, ಕ್ಷಯ, ಹೆಚ್‍ಐವಿ ರೋಗಿಗಳ ಮೇಲೆ ನಿಗಾ ಇರಿಸಿ ಸೂಕ್ತ ಚಿಕಿತ್ಸೆ ಮುಂದುವರೆಸಲಾಗಿದೆ.

ಕೋವಿಡ್ ಪಾಸಿಟಿವ್ ಇರುವ 9 ಪ್ರಕರಣಗಳಲ್ಲಿ ಇಬ್ಬರು ಗುಣಮುಖರಾಗಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 7 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಅವರು ಕೂಡ ಗುಣಮುಖರಾಗುತ್ತಿದ್ದಾರೆ ಎಂದರು.

ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್, ಜಿಪಂ ಸಿಇಓ ಡಾ.ಬಿ.ಸಿ.ಸತೀಶ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.

ABOUT THE AUTHOR

...view details