ಧಾರವಾಡ: ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ಹರಡವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಅಂದು ಸಂಜೆ 7 ಗಂಟೆಯಿಂದ ಮೇ 25ರ ಬೆಳಿಗ್ಗೆ 7 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಉತ್ಪಾದನೆ, ಸಾಗಾಟ ಮತ್ತು ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.
ನಾಳೆ ಧಾರವಾಡ ಸಂಪೂರ್ಣ ಲಾಕ್ ಡೌನ್: ಜಿಲ್ಲಾಧಿಕಾರಿ ಆದೇಶ - ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ
ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಈ ನಿಯಮ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶಿಸಿದ್ದಾರೆ.
ಜಿಲ್ಲಾಧಿಕಾರಿ ದೀಪಾ ಚೋಳನ್
ಈ ಆದೇಶ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ಹಾಗೂ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21ರ ಅನ್ವಯ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.