ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ವರುಣನ ಆರ್ಭಟ ಜೋರಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿ ಬಾರಿ ಅವಾಂತರ ಸೃಷ್ಟಿಯಾಗಿದೆ.
ಧಾರವಾಡ: ನಿರಂತರ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿ - Dharwad news
ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಬಾರೀ ಮಳೆಗೆ ನೀರು ಹೊಲ ಗದ್ದೆಗಳಿಗೆ ನುಗ್ಗಿ, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.
![ಧಾರವಾಡ: ನಿರಂತರ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿ ಹೊಲ ಗದ್ದೆಗಳು ಸಂಪೂರ್ಣ ಜಲಾವೃತ](https://etvbharatimages.akamaized.net/etvbharat/prod-images/768-512-8304555-182-8304555-1596623116334.jpg)
ಹೊಲ ಗದ್ದೆಗಳು ಸಂಪೂರ್ಣ ಜಲಾವೃತ
ಕುಂದಗೋಳ ತಾಲೂಕಿನ ಅಲ್ಲಾಪುರ, ಕಡಪಟ್ಟಿ, ಹಳ್ಯಾಳ ಸೇರಿದಂತೆ ಹಲವು ಗ್ರಾಮಗಳ ರೈತರಿಗೆ ನಷ್ಟವಾಗಿದೆ. ಹೊಲ ಗದ್ದೆಗಳು ಸಂಪೂರ್ಣ ಜಲಾವೃತವಾಗಿವೆ. ಹತ್ತಿ, ಮೆಣಸಿನಕಾಯಿ, ಸೂರ್ಯಕಾಂತಿ, ಉಳ್ಳಾಗಡ್ಡಿ ಬೆಳೆಗಳು ನಾಶವಾಗಿದ್ದು, ರೈತರು ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ.