ಧಾರವಾಡ: ಇಲ್ಲಿನ ಜಿಲ್ಲಾಸ್ಪತ್ರೆ ಆವರಣದಲ್ಲಿ ಕೋವಿಡ್ ತಪಾಸಣೆಗೆ ಮೂಗು ಮತ್ತು ಗಂಟಲು ದ್ರವದ ಮಾದರಿ ಸಂಗ್ರಹಣೆಗಾಗಿ ಪ್ರತ್ಯೇಕ ಕಿಯೋಸ್ಕ್ ಅಳವಡಿಸಲಾಗಿದೆ.
ಧಾರವಾಡ: ಗಂಟಲು ದ್ರವದ ಮಾದರಿ ಸಂಗ್ರಹಣೆಗಾಗಿ ಪ್ರತ್ಯೇಕ ಕಿಯೋಸ್ಕ್ ಅಳವಡಿಕೆ
ಧಾರವಾಡ ಜಿಲ್ಲಾಸ್ಪತ್ರೆ ಆವರಣದಲ್ಲಿ ಕೋವಿಡ್ ತಪಾಸಣೆಗೆ ಮೂಗು ಮತ್ತು ಗಂಟಲು ದ್ರವದ ಮಾದರಿ ಸಂಗ್ರಹಣೆಗಾಗಿ ಪ್ರತ್ಯೇಕ ಕಿಯೋಸ್ಕ್ ಅಳವಡಿಸಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ ಹಾಗೂ ಸೆಲ್ಕೋ ಸೋಲಾರ್ ಪ್ರೈವೇಟ್ ಲಿಮಿಟೆಡ್ ಸೇರಿ ಈ ಕೊಡುಗೆ ನೀಡಿವೆ. ರಾಜ್ಯದಾದ್ಯಂತ ಒಟ್ಟು 100 ಆಸ್ಪತ್ರೆಗಳಲ್ಲಿ ಇಂತಹ ಕಿಯೋಸ್ಕ್ ನಿರ್ಮಿಸಲಾಗಿದೆ.
ಈ ಕಿಯೋಸ್ಕ್ ನಲ್ಲಿ ಸೌರಶಕ್ತಿ ಚಾಲಿತ ವಿದ್ಯುತ್ ದೀಪ ಮತ್ತು ಫ್ಯಾನ್‍ಗಳನ್ನು ಅಳವಡಿಸಲಾಗಿದೆ. ಸೋಂಕು ನಿಯಂತ್ರಣಕ್ಕೆ ಇದು ಸಹಕಾರಿಯಾಗಲಿದೆ. ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಇದರ ಒಂದು ಘಟಕ ನಿರ್ಮಿಸಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳ ಸಲಹೆ ಆಧರಿಸಿ ಜಿಲ್ಲೆಯ ಇನ್ನೊಂದು ಆಸ್ಪತ್ರೆಯಲ್ಲಿ ಕಿಯೋಸ್ಕ್ ಸ್ಥಾಪಿಸಲಾಗುವುದು ಎಂದು ಸೆಲ್ಕೊ ಸೋಲಾರ್ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಸುರೇಶ ಸಾವಳಗಿ ತಿಳಿಸಿದ್ದಾರೆ.