ಕರ್ನಾಟಕ

karnataka

ETV Bharat / state

ಧಾರವಾಡ: 11 ದಿನಗಳವರೆಗೆ ಗಣೇಶೋತ್ಸವ ಆಚರಣೆಗೆ ಅವಕಾಶ - ganeshotsav

ಧಾರವಾಡದಲ್ಲಿ ಗರಿಷ್ಠ 11 ದಿನಗಳವರೆಗೆ ಕೋವಿಡ್ ಮಾರ್ಗಸೂಚಿಗಳೊಂದಿಗೆ ಗಣೇಶೋತ್ಸವ ಆಚರಿಸಲು ಜಿಲ್ಲಾಧಿಕಾರಿ ಅವಕಾಶ ನೀಡಿದ್ದಾರೆ.

ganeshotsav in dharwad
11 ದಿನಗಳವರೆಗೆ ಗಣೇಶೋತ್ಸವ ಆಚರಣೆಗೆ ಅವಕಾಶ

By

Published : Sep 13, 2021, 9:34 PM IST

ಧಾರವಾಡ:ಜಿಲ್ಲೆಯಲ್ಲಿ ಗಣೇಶೋತ್ಸವವನ್ನು ಗರಿಷ್ಠ 11 ದಿನಗಳವರೆಗೆ ಕೋವಿಡ್ ಮಾರ್ಗಸೂಚಿಗಳೊಂದಿಗೆ ಆಚರಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಸೆ.5 ರಂದು ಹೊರಡಿಸಿದ್ದ ಮಾರ್ಗಸೂಚಿಗಳಲ್ಲಿ ಗರಿಷ್ಟ 5 ದಿನ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗಿತ್ತು. ಪರಿಷ್ಕೃತ ಆದೇಶದಲ್ಲಿ ಈ ನಿಯಮ‌ ಸಡಿಲಿಸಿ ಜಿಲ್ಲೆಯಲ್ಲಿ ಈ ಹಿಂದೆ ಸಾಂಪ್ರದಾಯಿಕವಾಗಿ 11 ದಿನಗಳವರೆಗೆ ಗಣೇಶೋತ್ಸವ ಆಚರಿಸುತ್ತಿದ್ದವರಿಗೆ ಈ ಬಾರಿಯೂ ಗರಿಷ್ಟ 11 ದಿನಗಳ ಕಾಲ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗಿದೆ.

ಆಚರಣೆ ವೇಳೆ ಕೋವಿಡ್-19 ರ ಎಲ್ಲ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details